ಭೀಮಲಿಂಗೇಶ್ವರ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆದ ಕೊನೆ ಕಾರ್ತಿಕ ಮಾಸದ ಪೂಜಾ ಮಹೋತ್ಸವ.
ಮಳವಳ್ಳಿ ತಾಲೂಕಿನ ಹಲಗೂರು ಹೋಬಳಿ ಬ್ಯಾಡರಹಳ್ಳಿ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಬರುವಂತಹ ಭೀಮೇಶ್ವರಿಯಲ್ಲಿ ಶ್ರೀ ಭೀಮಲಿಂಗೇಶ್ವರ ದೇವಾಲಯದಲ್ಲಿ ಕಾರ್ತಿಕ ಮಾಸದ ಪೂಜಾ ಮಹೋತ್ಸವ ಅದ್ದೂರಿಯಾಗಿ ಜರುಗಿತು. ಪ್ರತಿ ವರ್ಷದಂತೆ ಈ ವರ್ಷವೂ ಅಂದರೆ ಸೋಮವಾರ ಶ್ರೀ ಭೀಮಲಿಂಗೇಶ್ವರ ಮೂರ್ತಿಗೆ ಬೆಳಿಗ್ಗೆಯಿಂದಲೇ ಹೂವಿನ ಅಲಂಕಾರ ಮಾಡಿ ವಿಶೇಷ ಪೂಜೆ ನೆರೆವೇರಿಸಲಾಯಿತು.
ಈ ಸಂದರ್ಭದಲ್ಲಿ ಕನಕಪುರ ತಾಲೂಕು ಕುರುಬರ ಸಂಘದ ಅಧ್ಯಕ್ಷರು ಚಂದ್ರು ಮಾತನಾಡಿ ಪ್ರತಿ ವರ್ಷದಂತೆ ಈ ಭಾರಿಯೂ ಅದ್ದೂರಿಯಾಗಿ ಕಡೆ ಕಾರ್ತಿಕ ಸೋಮವಾರ ದಿನದಂದು ಭಕ್ತದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ ಕೃಪೆಗೆ ಪಾತ್ರರಾಗಿದ್ದಾರೆ.
ಮೈಸೂರು, ಬೆಂಗಳೂರು, ಕನಕಪುರ,ಹೀಗೆ ಅನೇಕ ಜಿಲ್ಲೆ ತಾಲೂಕುಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವರ ದರ್ಶನ ಪಡೆಯುತ್ತಾರೆ. ಈ ಸಂದರ್ಭದಲ್ಲಿ ಬಂದತಹ ಭಕ್ತಾದಿಗಳಿಗೆ ಬ್ಯಾಡರಹಳ್ಳಿ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ನೇರೆವೆರಿಸಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಹಕಾರ ನೀಡಿದಕ್ಕೆ ಧನ್ಯವಾದಗಳು ತಿಳಿಸಿದರು.
ಈ ಸಂದರ್ಭದಲ್ಲಿ ರವಿಬುರ್ಜಿ ಅವರ ನೇತೃತ್ವದಲ್ಲಿ ಬಿಗಿ ಬಂದು ಬಸ್ತ್ ನೀಡಿದರು.
ಈ ಸಂದರ್ಭದಲ್ಲಿ ಬ್ಯಾಡರಹಳ್ಳಿ ಗ್ರಾಮದ ಮುಖಂಡರು ಪಟೇಲ್ ಜಯರಾಮ್,ರಮೇಶ್,ದಿನೇಶ್. ಎಂ, ಪ್ರಸಾದ್,ಚಿಕ್ಕಸ್ವಾಮಿ,ಅರ್ಚಕರಾದ ಕುಮಾರಸ್ವಾಮಿ, ಬೀರಪ್ಪ, ಶಿವು,ಶಿವಕುಮಾರ್, ಸುತ್ತಮುತ್ತಲಿನ ಗ್ರಾಮಸ್ಥರು ಹಾಜರಿದ್ದರು.
ಹಲಗೂರು ಸುದ್ದಿ
ವರದಿಗಾರರು:-ಪ್ರತಾಪ್ ಎ. ಬಿ
What's Your Reaction?