ಶಕ್ತಿ ಯೋಜನೆಯನ್ನು ಪುನರ್ ಪರಿಶೀಲನೆ ಮಾಡಿ ಸಮಾಜ ಸೇವಕ ಮಂಜುನಾಥ್.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಶಕ್ತಿಯೋಜನೆಯನ್ನು ಪುನರ್ ಪರಿಶೀಲನೆ ಮಾಡಿ ಇಲ್ಲವೇ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕೆಲವು ಮಾರ್ಪಾಡು ಮಾಡಬೇಕೆಂದು ಸಮಾಜ ಸೇವಕ ಮಂಜುನಾಥ ಒತ್ತಾಯಿಸಿದರು. ಮಳವಳ್ಳಿ ಪಟ್ಟಣದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ,
ಶಕ್ತಿಯೋಜನೆಯಿಂದ ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ನಿಗದಿತ ಶಾಲಾ ಕಾಲೇಜುಗಳಿಗೆ ತಲುಪಲು ಸಾಧ್ಯವಾಗುತ್ತಿಲ್ಲ, ಬಸ್ ನಲ್ಲಿ ಮಹಿಳೆಯರು ಹೆಚ್ಚಾಗಿ ಪ್ರಮಾಣ ಮಾಡುತ್ತಿದ್ದಾರೆ ಈ ಯೋಜನೆ ರದ್ದು ಮಾಡಿ ಆಹಾರ ಪದಾರ್ಥಗಳು ಬೆಲೆಯನ್ನು ಕಡಿಮೆ ಇದರಿಂದ ಬಡವರಿಗೆ ಅನುಕೂಲವಾಗುತ್ತದೆ ಎಂದರು. ಕೂಡಲೇ ಕ್ರಮ ಕೈಗೊಳ್ಳದಿದ್ದರೆ ವಿದ್ಯಾರ್ಥಿಗಳ ಜೊತೆಗೂಡಿ ಹೋರಾಟ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.
*ಮಳವಳ್ಳಿ ಸುದ್ದಿ*
ವರದಿಗಾರರು:-ಪ್ರತಾಪ್. ಎ.ಬಿ
What's Your Reaction?






