ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯದ್ಯಕ್ಷರಾದ ಟಿ.ಎ ನಾರಾಯಣಗೌಡ ರವರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಚನ್ನರಾಯಪಟ್ಟಣ ಮೈಸೂರು ಮುಖ್ಯ ರಸ್ತೆಯ ತಡೆದು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೋಗಿ ಪ್ರತಿಭಟನೆ ನೆಡಸಿದ್ರು
ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಮಂಡ್ಯ ಜಿಲ್ಲಾ ಉಪಾಧ್ಯಕ್ಷರಾದ ಸಾಸಲು ಗುರುಮೂರ್ತಿ, ತಾಲ್ಲೂಕು ಅಧ್ಯಕ್ಷರಾದ ವೇಣು, ಕಿಕ್ಕೇರಿ ಹೋಬಳಿ ಘಟಕದ ಅಧ್ಯಕ್ಷರಾದ ಸೊಳ್ಳೇಪುರ ಸುರೇಶ್ ನೇತೃತ್ವದಲ್ಲಿ ಮೈಸೂರು ಚನ್ನರಾಯಪಟ್ಟಣ ಮುಖ್ಯ ರಸ್ತೆಯನ್ನು ಕೆಲ ಕಾಲ ರಸ್ತೆ ತಡೆದು ಪ್ರತಿಭಟನೆ ನೆಡೆಸಿದ್ರು..
ನಂತರ ಜಿಲ್ಲಾ ಉಪಾದ್ಯಕ್ಷರಾದ ಸಾಸಲು ಗುರುಮೂರ್ತಿ ಮತ್ತು ತಾಲ್ಲೂಕು ಅಧ್ಯಕ್ಷರಾದ ವೇಣು ಮಾತನಾಡಿ ಕನ್ನಡ ಭಾಷೆಯ ನಾಮಫಲಕ ಹಾಕುವಂತೆ ಒತ್ತಾಯಿಸಿ ಬುಧವಾರ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡುತ್ತಿದ್ದ ಕನ್ನಡಪರ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರನ್ನೂ ಬಂಧಿಸಲಾಗಿದೆ. ನಾರಾಯಣ ಗೌಡ ಮತ್ತು ಕಾರ್ಯಕರ್ತರನ್ನು ತಕ್ಷಣ ಬಿಡುಗಡೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿ ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟವನ್ನು ಮಾಡಬೇಕುತ್ತೆ ಎಂದು ಘೋಷಣೆ ಕೋಗುವ ಮೂಲಕ ಎಚ್ಚರಿಕೆ ನೀಡಲಾಯಿತು..
ಈ ಸಂದರ್ಭದಲ್ಲಿ ಯುವ ಘಟಕದ ಅಧ್ಯಕ್ಷ ಆನಂದ, ತಾಲ್ಲೂಕು ಕಾರ್ಯದರ್ಶಿ ಶ್ರೀನಿವಾಸ್, ಯುವ ಘಟಕದ ಕಾರ್ಯದರ್ಶಿ, ಮನು, ಶೀಳನೆರೆ ಹೋಬಳಿ ಅಧ್ಯಕ್ಷರು, ಚನ್ನೇಗೌಡ, ಸಂತೇಚಾಚಹಳ್ಳಿ ಹೋಬಳಿ ಅಧ್ಯಕ್ಷ ಗೊರವಿ ಸಾಗರ್, ಹರೀಶ್, ಸಂಘಟನಾ ಕಾರ್ಯದರ್ಶಿ ಸ್ವಾಮಿ, ಗೋಪಿಗೌಡ, ಹೊಡಕಹಳ್ಳಿ ಶಿವು, ಮಾದಹಳ್ಳಿ ಶಂಕರ್, ಯೋಗ,ಸೇರಿದಂತೆ ನೂರಾರು ಕರವೇ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
*ವರದಿ, ರಾಜು ಜಿಪಿ ಕಿಕ್ಕೇರಿ ಕೆ ಆರ್ ಪೇಟೆ*
What's Your Reaction?