*ಸಮಾಜ ಮತ್ತು ಕುಟುಂಬ ಸುಧಾರಣೆಯಲ್ಲಿ ಮಹಿಳೆಯರ ಪಾತ್ರ*
*ಸಮಾಜ ಮತ್ತು ಕುಟುಂಬ ಸುಧಾರಣೆಯಲ್ಲಿ ಮಹಿಳೆಯರ ಪಾತ್ರ*
*ಕೆ. ಆರ್. ಪೇಟೆ ಸಮಾಜ ಮತ್ತು ಕುಟುಂಬ ಸುಧಾರಣೆಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ ಮಹಿಳೆಯರಲ್ಲಿ ಆತ್ಮವಿಶ್ವಾಸ ಮೂಡಿಸಿದಾಗ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯವೆಂದು ನಂಬಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಬೆನ್ನೆಲುಬಾಗಿ ನಿಂತಿದೆ ಎಂದು ಶಾಸಕ ಹೆಚ್.ಟಿ ಮಂಜು ಹೇಳಿದರು*
ಪಟ್ಟಣದಲ್ಲಿರುವ ನಂಜಮ್ಮ ಮುದ್ದೇಗೌಡ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಹಾಗೂ ಪ್ರಗತಿ ಬಂದು ಸ್ವಯಂ ಸಹಾಯ ಸಂಘಗಳ ಒಕ್ಕೂಟದಿಂದ ಆಯೋಜಿಸಿದ್ದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಧರ್ಮಸ್ಥಳ ಸಂಘದ ಹಲವು ವರ್ಷಗಳಲ್ಲಿ ತಾಲೂಕಿನಲ್ಲಿ ಸಾವಿರಾರು ಮಹಿಳೆಯರು ಸ್ವಾವಲಂಬಿ ಬದುಕು ಕಂಡುಕೊಂಡು, ಕುಟುಂಬದ ಆರ್ಥಿಕತೆಗೆ ಹೆಗಲೊಡ್ಡಿದೆ,ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿ ಹೆಚ್ಚಿನ ದಾಖಲೆಗಳ ಜಂಜಾಟವಿಲ್ಲ. ಕಡಿಮೆ ಬಡ್ಡಿ ದರದಲ್ಲಿ ಸ್ವಸಹಾಯ ಸಂಘದ ಮೂಲಕ ಮಹಿಳೆಯರು ಸಾಲ ಪಡೆಯಬಹುದಾಗಿದೆ ಹೀಗಾಗಿ ಸಣ್ಣ-ಪುಟ್ಟ ವ್ಯಾಪಾರ ಆರಂಭಿಸಬೇಕು ಕುಟುಂಬದ ಆರ್ಥಿಕ ಸ್ಥಿತಿ ಉತ್ತಮಗೊಳಿಸಬೇಕೆಂಬ ಕನಸು ಕಾಣುವ ಪಟ್ಟಣ ಮತ್ತು ಗ್ರಾಮೀಣ ಭಾಗದ ಅದೆಷ್ಟೋ ಬಡ ಮಹಿಳೆಯರಿಗೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಭರವಸೆ ಬೆಳಕಾಗಿದೆ ಹತ್ತಾರು ಬ್ಯಾಂಕ್‌ಗಳು, ನೂರಾರು ಸಾಲ ಸೌಲಭ್ಯದ ಯೋಜನೆಗಳಿದ್ದರೂ,ಸ್ವಸಹಾಯ ಮಹಿಳಾ ಸಂಘದ ಸದಸ್ಯೆಯರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯೇ ಅಚ್ಚುಮೆಚ್ಚು ಎಂದರು.
ಮನ್ಮುಲ್ ನಿರ್ದೇಶಕ ಕೆ. ರವಿ (ಡಾಲು ರವಿ) ಮಾತನಾಡಿ ಧರ್ಮಸ್ಥಳ ಸಂಘ ಯಾವುದೆ ಜಂಜಾಟದ ದಾಖಲೆ ಇಲ್ಲದೆ ಸಾಲ ನೀಡುತ್ತದೆ ಎಂಬ ದೃಷ್ಟಿಯಿಂದ ಸಾಲ ತೆಗೆದುಕೊಂಡು ದುಂದು ವೆಚ್ಚ ಮಾಡಿ ಸಂಕಷ್ಟಕ್ಕೆ ಸಿಲುಕುವ ಬದಲು,ಬದುಕು ಗಟ್ಟಿಗೊಳಿಸುವುದಕ್ಕೆ ಸಮರ್ಪಕವಾಗಿ ಬಳಸಿಕೊಂಡರೆ ಸಂಘಕ್ಕು ಉತ್ತಮ ಹೆಸರು,ಒಳ್ಳೆಯ ಆಲೋಚನೆ, ಸನ್ನಡತೆ ರೂಢಿಸಿಕೊಂಡಾಗ ನಾವು ಸಮಾಜಕ್ಕೆ ಆಸ್ತಿಯಾಗುತ್ತೇವೆ ಮನುಷ್ಯ ಧರ್ಮದ ದಾರಿಯಲ್ಲಿ ನಡೆದಾಗ ಭಗವಂತನ ಅನುಗ್ರಹ ಪ್ರಾಪ್ತವಾಗುತ್ತದೆ.ಧರ್ಮಸ್ಥಳದ ಧರ್ಮಾಧಿಕಾರಿಗಳು ಪ್ರತಿ ಹಳ್ಳಿ ಹಳ್ಳಿಗಳಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳನ್ನು ನಡೆಸಿ ಜನರಲ್ಲಿ ಧಾರ್ಮಿಕ ಜಾಗೃತಿಯನ್ನು ಮೂಡಿಸುತ್ತಿರುವುದು ಶ್ಲಾಘನೀಯವಾದದ್ದು ಎಂದು ತಿಳಿಸಿದರು.
ಅರೋಗ್ಯ ರಕ್ಷಾ ಕಾರ್ಯಕ್ರಮದಡಿ ಮಂಜುರಾದ ಕ್ಯಾನ್ಸರ್ ಚಿಕಿತ್ಸೆ ಗೆ 20. ಸಾವಿರ ಮೊತ್ತದ ಚೆಕ್ ನ್ನು ಶ್ರೀಮತಿ ರಮಾಮಣಿ ಕೆ ಬಿ ಚಂದ್ರಶೇಖರ್ ರವರು ವಿತರಣೆ ಮಾಡಿದರು ಕುವೆಂಪು ಕನ್ನಡ ಗೆಳೆಯರ ಬಳಗದ ಸಂಸ್ಥಾಪಕ ಅಧ್ಯಕ್ಷರು ಮಂಜುನಾಥ್ ಪಾಲ್ಗೊಂಡಿದ್ದರು...
ಈ ಸಂದರ್ಭದಲ್ಲಿ ಧರ್ಮಸ್ಥಳ ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ,ಜಿಲ್ಲಾ ಜಲಜಾಗೃತಿ ವೇದಿಕೆ ನಿಕಟ ಪೂರ್ವ ಅಧ್ಯಕ್ಷ ಕೆ ಎಸ್ ರಾಜೇಶ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಜ್ಯೋತಿ, ಬಿ. ಆರ್ ಇಂದಿರಾ ಸತೀಶ್ ಬಾಬು, ಲತಾ ಅರವಿಂದ್, ಕ್ಷೇತ್ರ ಯೋಜನಾಧಿಕಾರಿ ಮಮತಾ ಶೆಟ್ಟಿ, ಪುರಸಭಾ ಮಾಜಿ ಸದಸ್ಯ ಕೆ.ಆರ್ ನೀಲಕಂಠ,ಶಾಸಕರ ಆಪ್ತ ಸಹಾಯಕ ಪ್ರತಾಪ್ ಸೇರಿದಂತೆ ಉಪಸ್ಥಿತರಿದ್ದರು.
ವರದಿ *ರಾಜು ಜಿಪಿ ಕಿಕ್ಕೇರಿ*
What's Your Reaction?