ಚನ್ನರಾಯಪಟ್ಟಣ: ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿ ಹಳೆಯ ನೋಂದಾವಣೆ ರದ್ದಾಗಿ, ಹೊಸ ನೋಂದಾವಣೆ ಆದೇಶ ಮಾಡಿರುವ ರಾಜ್ಯ ಸರ್ಕಾರದ ತೀರ್ಮಾನವನ್ನು ಮಾಜಿ ವಿಧಾನ ಪರಿಷತ್ ಸದಸ್ಯ ಎಂ ಎ ಗೋಪಾಲಸ್ವಾಮಿ
ಸ್ವಾಗತಿಸಿದರು. ಪಟ್ಟಣ ಪತ್ರಿಕಾ ಭವನದಲ್ಲಿ ಪತ್ರಕರ್ತರ ಉದ್ದೇಶ ಮಾತನಾಡಿದ ಮಾಜಿ ಎಂಎಲ್ಸಿ ಗೋಪಾಲಸ್ವಾಮಿ ಕೊಬ್ಬರಿ ನೋಂದಾವಣೆಯಲ್ಲಿ ಆಕ್ರಮ ನೊಂದಾವಣಿ ಮಾಡಿದ ಅಧಿಕಾರಿಗಳನ್ನು ಅಮಾನತುಗೊಳಿಸಿ, ಹೊಸ ಅಧಿಕಾರಿಗಳನ್ನು ನೇಮಕ ಮಾಡಿ, ಕೊಬ್ಬರಿ ಖರೀದಿ ಹೊಸ ನೊಂದಾವಣಿಗೆ ಅವಕಾಶ ಕಲ್ಪಿಸಿರುವ ರಾಜ್ಯ ಸರ್ಕಾರಕ್ಕೆ ಧನ್ಯವಾದಗಳು ಸಲ್ಲಿಸುವುದಾಗಿ ತಿಳಿಸಿದರು ,ನಬಾರ್ಡ್ ವತಿಯಿಂದ ನಿಜವಾದ ಫಲಾನುಭವಿಗಳನ್ನು ಗುರುತಿಸಿ ನೋಂದಾವಣೆ ಕಾರ್ಯವನ್ನು ಮಾಡಬೇಕೆಂದು ಆಗ್ರಹಿಸಿದರು. ಕೂಡಲೇ ಜಿಲ್ಲಾಧಿಕಾರಿಗಳು ರೈತರ ಹಾಗೂ ಅಧಿಕಾರಿಗಳ ಸಭೆ ಕರೆದು ಎಲ್ಲಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಮಾಡಿ, ಕೊಬ್ಬರಿ ಬೆಳೆದಿರುವ ರೈತರನ್ನು ಗುರುತಿಸಿ ನೋಂದಾವಣಿಗೆ ಆದ್ಯತೆ ನೀಡಬೇಕೆಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಮಾಜಿ ಎಂಎಲ್ಸಿ ಗೋಪಾಲಸ್ವಾಮಿ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಕೆ ಮಂಜೇಗೌಡ, ಎಸ್ ಸಿ ಎಸ್ ಟಿ ಕಾಂಗ್ರೆಸ್ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ನಾಗಸಮುದ್ರ ಬಾಲು, ಮಾಜಿ ಪಿಎಲ್ಡ್ ಬ್ಯಾಂಕ್ ಅಧ್ಯಕ್ಷರಾದ ಗುರುಮಾರನಹಳ್ಳಿ ಮೂರ್ತಿ, ಕಾಂಗ್ರೆಸ್ ಹಿಂದುಳಿದ ವಿಭಾಗದ ಮುಖಂಡ ಕಬ್ಬಾಳ್ ಮಹೇಶ್, ಹಿರೀಸಾವೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕಿರಣ್ ಸೇರಿದಂತೆ ಇತರರು ಹಾಜರಿದ್ದರು.
What's Your Reaction?