ವಿಶ್ವ ವಿಖ್ಯಾತ ವೈರಮುಡಿ ಉತ್ಸವದ ಹಿನ್ನೆಲೆಯಲ್ಲಿ ವಜ್ರ ಖಚಿತ ವೈರಮುಡಿ ಹಾಗೂ ರಾಜಮುಡಿಗೆ ವಿಶೇಷ ಪೂಜೆ ಸಲ್ಲಿಸಿದರು

ವಿಶ್ವ ವಿಖ್ಯಾತ ವೈರಮುಡಿ ಉತ್ಸವದ ಹಿನ್ನೆಲೆಯಲ್ಲಿ ವಜ್ರ ಖಚಿತ ವೈರಮುಡಿ ಹಾಗೂ ರಾಜಮುಡಿಗೆ ವಿಶೇಷ ಪೂಜೆ ಸಲ್ಲಿಸಿದರು

ಪ್ರಸಿದ್ಧ ಯಾತ್ರಾಸ್ಥಳ ಮೇಲುಕೋಟೆಗೆ ಗುರುವಾರ

ಕೊಂಡೊಯ್ಯಲಾಯಿತು.

ನಗರದ ಜಿಲ್ಲಾ ಖಜಾನೆಯಲ್ಲಿದ್ದ ವಜ್ರ ಖಚಿತ ವೈರಮುಡಿ ಮತ್ತು

ರಾಜಮುಡಿ ಯನ್ನು ಬೆಳಿಗ್ಗೆ ಹೊರ ತೆಗೆದು ವಿಶೇಷ ಪೂಜೆ

ಸಲ್ಲಿಸಲಾಯಿತು.

ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಅಪಾರ ಜಿಲ್ಲಾಧಿಕಾರಿ ಡಾ. ಎಚ್ ಎಲ್ ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಯತೀಶ್ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ

ಪೊಲೀಸ್ ಬಿಗಿ ಭದ್ರತೆಯಲ್ಲಿ

ಮೈಸೂರಿನ ಶ್ರೀಬ್ರಹ್ಮತಂತ್ರ ಸ್ವತಂತ್ರ ಪರಕಾಲಸ್ವಾಮಿ ಮಠದ

ವಾಹನ ವೈರಮುಡಿ, ರಾಜಮುಡಿ ಮತ್ತು ವಜ್ರಾಭರಣಗಳನ್ನು

ಹೊತ್ತು ಸಾಗಿತು.

ನಗರದ ಶ್ರೀ ಲಕ್ಷ್ಮಿ ಜನಾರ್ಧನ ಸ್ವಾಮಿ ದೇವಾಲಯದಲ್ಲಿ

ವೈರಮುಡಿ ಮತ್ತು ರಾಜಮುಡಿಗೆ ಮೊದಲ ಪೂಜೆ

ಸಮರ್ಪಿಸಲಾಯಿತು,ಸಂಪ್ರದಾಯದಂತೆ ಮೇಲುಕೋಟೆಯತ್ತ

ಹೊರಟ ವಜ್ರ ಖಚಿತ ವೈರಮುಡಿಗೆ ಮಾರ್ಗದುದ್ದಕ್ಕೂ ಹಳ್ಳಿ

ಹಳ್ಳಿಗಳಲ್ಲಿ ಜನತೆ ಪೂಜೆ ಸಲ್ಲಿಸಿ ಪಾನಕ ವಿತರಿಸಿದರು.

ವೈರಮುಡಿ ಉತ್ಸವದ ಅಂಗವಾಗಿ ವರ್ಷಕ್ಕೊಮ್ಮೆ ವೈರಮುಡಿ

ಕಿರೀಟವನ್ನು ಖಜಾನೆಯಿಂದ ಹೊರ ತೆಗೆಯಲಾಗುತ್ತದೆ.

ವೈರಮುಡಿಯ ದಿನ ಸಂಜೆಯ ಶುಭ ಮುಹೂರ್ತದಲ್ಲಿ ಪ್ರಧಾನ

ಅರ್ಚಕರು ಕಣ್ಣಿಗೆ ರೇಷ್ಮೆ ವಸ್ತ್ರ ಕಟ್ಟಿಕೊಂಡು ವೈರಮುಡಿಯನ್ನು

ಪೆಟ್ಟಿಗೆಯಿಂದ ಹೊರತೆಗೆದು ಶ್ರೀ ಚಲುವನಾರಾಯಣಸ್ವಾಮಿಯ

ಶಿರದ ಮೇಲಿಟ್ಟು ಇತರ ಆಭರಣಗಳಿಂದ ಅಲಂಕರಿಸುತ್ತಾರೆ.

ಶ್ರೀದೇವಿ ಭೂದೇವಿ ಸಮೇತನಾಗಿ ಗರುಡಾರೂಢನಾದ

ಚೆಲುವನಾರಾಯಣನ ವೈರಮುಡಿ ಉತ್ಸವ

ಮಹಾಮಂಗಳಾರತಿಯೊಂದಿಗೆ ಆರಂಭಗೊಂಡು ಮುಂಜಾನೆವರೆಗೆ

ನಡೆಯಲಿದ್ದು, ಅಪಾರ ಸಂಖ್ಯೆಯ ಭಕ್ತರು ಶ್ರೀ ಚೆಲುವ ನಾರಾಯಣ

ಸ್ವಾಮಿಯ ವೈರಮುಡಿ ಉತ್ಸವವನ್ನು ಕಣ್ಣುಂಬಿಕೊಳ್ಳಲಿದ್ದಾರೆ.

ವರದಿ ರಾಜು ಜಿ ಪಿ ಕಿಕ್ಕೇರಿ ಕೆ ಆರ್ ಪೇಟೆ

What's Your Reaction?

like

dislike

love

funny

angry

sad

wow