ಗಂಡ ಹಾಗೂ ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಗೃಹಿಣಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ

ಗಂಡ ಹಾಗೂ ಗಂಡನ ಮನೆಯವರ  ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಗೃಹಿಣಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ

ಕೃಷ್ಣರಾಜಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿಯ ಲಿಂಗಾಪುರ ಗ್ರಾಮದ ಬಡ ಕುಟುಂಬದ ಯುವತಿ ಪ್ರೇಮಕುಮಾರಿ (26) ದಿನಾಂಕ 6-3-2022 ರಂದು ಮೈಸೂರು ನಿವಾಸಿ ರಾಘವೇಂದ್ರ ಅವರಿಗೆ ವಿವಾಹವಾಗಿದ್ದ ಪ್ರೇಮಕುಮಾರಿ ಕೆಲವೇ ತಿಂಗಳು ಅನನ್ಯವಾಗಿದ್ದ ಜೋಡಿ ನಂತರ ಪ್ರೇಮಕುಮಾರಿ

ತಾಯಿಯ ಮನೆಗೆ ಹಿಂತಿರುಗಿದ್ದರು ಗಂಡನ ಸೇರಿದಂತೆ ಅವರ ಕುಟುಂಬಸ್ಥರು ನಿರಂತರ ವರದಕ್ಷಿಣೆ ಮತ್ತು ಕೊಲೆ ಬೆದರಿಕೆಯಿಂದ ಬೇಸತ್ತು ದಿನಾಂಕ 20-3-2024 ಬುಧವಾರ ಸುಮಾರು ನಾಲ್ಕು ಗಂಟೆ ಸಮಯದಲ್ಲಿ ಲಿಂಗಾಪುರ ಗ್ರಾಮದಲ್ಲಿ ಸುಮಾರು ಐದು ಪುಟಗಳ ಡೆತ್ ನೋಟ್ ಬರೆದಿಟ್ಟು ಮೃತ ಪ್ರೇಮಕುಮಾರಿ

ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಷಯ ತಿಳಿಯುತ್ತಲೇ ಸ್ಥಳಕ್ಕೆ ದೌಡಾಯಿಸಿದ ಕಿಕ್ಕೇರಿ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೆ. ಆರ್.ಪೇಟೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಗುರುವಾರ ತಡರಾತ್ರಿ ಲಿಂಗಾಪುರ ಗ್ರಾಮದಲ್ಲಿ ಮೃತ ದುರ್ದೈವಿ ಪ್ರೇಮಕುಮಾರಿ ಅವರ ಅಂತ್ಯ ಸಂಸ್ಕಾರ ನೆರವೇರಿದೆ ಎಂದು ತಡವಾಗಿ ಬೆಳಕಿಗೆ ಬಂದಿದೆ.

ಈ ಘಟನೆಯ ಸಂಬಂಧ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಪ್ರೇಮಕುಮಾರಿ ರವರ ಕುಟುಂಬಕ್ಕೆ ಸಾಂತ್ವನ ತಿಳಿಸಿದ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಡಾಲು ರವಿ, ಸಮಾಜ ಸೇವಕ ಆರ್ ಟಿ ಓ ಮಲ್ಲಿಕಾರ್ಜುನ್, ಟಿಎಪಿಸಿಎಂಎಸ್ ಮಾಜಿನಿರ್ದೇಶಕ ಹೆಚ್.ಟಿ ಲೋಕೇಶ್, ಅಖಿಲ ಭಾರತ ವೀರಶೈವ ಲಿಂಗಾಯತ

ಮಹಾಸಭಾದ ಕೃಷ್ಣರಾಜಪೇಟೆ ತಾಲೂಕು ಅಧ್ಯಕ್ಷ ವಿ.ಎಸ್ ಧನಂಜಯ್ ಕುಮಾರ್, ಸೇರಿದಂತೆ ಅನೇಕ ಗಣ್ಯರು ಧೈರ್ಯ ತುಂಬಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮೃತರ ಕುಟುಂಬಸ್ಥರು ಕಂಬನಿ ಮಿಡಿಯುತ್ತಾ ತಪ್ಪಿಸಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಮನವಿ ಮಾಡಿ ಬೇಡಿಕೊಂಡರು.

*ವರದಿ:ರಾಜು ಜಿ ಪಿ,ಕಿಕ್ಕೇರಿ ಕೆ ಆರ್, ಪೇಟೆ*

What's Your Reaction?

like

dislike

love

funny

angry

sad

wow