ಕೆ.ಆರ್.ಪೇಟೆ:2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ

ದಿನಾಂಕ-25-೦3-2024 ರಿಂದ ೦6-04-2024 ರ ವೆರೆಗೆ ನಡೆಯಲ್ಲಿದ್ದು ತಾಲ್ಲೂಕಿನ 59 ಪ್ರೌಢಶಾಲೆಗಳ ಒಟ್ಟು 2967 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು 1529 ವಿದ್ಯಾರ್ಥಿನಿಯರು 1438ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಸರ್ಕಾರಿ ಪ್ರೌಢಶಾಲೆಗಳ 1930 ವಿದ್ಯಾರ್ಥಿಗಳು, ಅನುದಾನಿತ ಪ್ರೌಢಶಾಲೆಗಳ 421 ವಿದ್ಯಾರ್ಥಿಗಳು ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳ 560 ವಿದ್ಯಾರ್ಥಿಗಳು ಒಟ್ಟು 6 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ಸೀತಾರಾಮು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ತಾಲ್ಲೂಕಿನಲ್ಲಿ ಯಾವುದೇ ಸೂಕ್ಷö್ಮ ಅಥವಾ ಅತೀ ಸೂಕ್ಷö್ಮ ಪರಿಕ್ಷಾ ಕೇಂದ್ರಗಳಿರುವುದಿಲ್ಲ. ಎಲ್ಲಾ ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಲ್ಲಿ ಸಿ.ಸಿ. ಟಿವಿ ಯನ್ನು ಅಳವಡಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲೂ ವೆಬ್ ಕ್ಯಾಸ್ಟಿಂಗ್ ಮಾಡಲು ಕ್ರಮ ಕೈಗೊಳ್ಳಲಾಗಿದ್ದು ಪರೀಕ್ಷಾ ಕೇಂದ್ರಗಳ ಕಾರ್ಯ ಚಟುವಟಿಕೆಯನ್ನು ತಾಲ್ಲೂಕು ಹಂತದಲ್ಲಿ ಜಿಲ್ಲಾ ಹಂತದಲ್ಲಿ ಮತ್ತು ರಾಜ್ಯ ಹಂತದಲ್ಲಿಯೂ ಸಹ ವೀಕ್ಷಣೆ ಮಾಡಬಹುದಾಗಿದೆ ಇದಕ್ಕಾಗಿ ತಾಲ್ಲೂಕು ಹಂತದಲ್ಲಿ ತಾಂತ್ರಿಕ ಸಲಹಾ ಸಮಿತಿ ರಚಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೂ ಇಬ್ಬರು ಸ್ಥಾನಿಕ ಜಾಗೃತ ದಳ ಸಿಬ್ಬಂದಿ ತಾಲ್ಲೂಕಿನ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ತಾಲ್ಲೂಕು ಹಂತದಲ್ಲಿ ತಹಶೀಲ್ದಾರ್, ಕಾರ್ಯ ನಿವಾಹಕ ಅಧಿಕಾರಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇತೃತವದಲ್ಲಿ ವಿಚಕ್ಷಣ ದಳವನ್ನು ರಚಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಾ 200 ಮೀ ವ್ಯಾಪ್ತಿಯ ಪ್ರದೇಶವನ್ನು ನಿಷೇದಿತ ಪ್ರದೇಶ ಎಂದು ಘೋಷಿಸಲಾಗಿದೆ. ಪರೀಕ್ಷಾ ಕೇಂದ್ರದ ಹತ್ತಿರದಲ್ಲಿರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೂ ಭದ್ರತೆಗಾಗಿ ಆರಕ್ಷಕ ಸಿಬ್ಬಂಧಿ ಹಾಗೂ ಮಕ್ಕಳ: ಆರೋಗ್ಯ ಕಾಳಜಿಗಾಗಿ ಶುಸ್ರೂಷಕರನ್ನು ನಿಯೋಜಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಡಿಜಿಟಲ್ ಹಾಗೂ ಸ್ಮಾರ್ಟ್ ಕೈಗಡಿಯಾರಗಳನ್ನು ಧರಿಸುವಂತಿಲ್ಲ, ಪರೀಕ್ಷಾ ಕೇಂದ್ರಕ್ಕೆ ತರುವಂತಿಲ್ಲ ಹಾಗೂ ತಮ್ಮ ಬಳಿ ಇಟ್ಟುಕೊಳ್ಳುವಂತಿಲ್ಲ.
ತಾಲ್ಲೂಕಿನ ಎಲ್ಲಾ ೬ ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯದ ವ್ಯಸ್ಥೆ ಮಾಡಲಾಗಿದ್ದು ಎಲ್ಲಾ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯಲು ಸೂಕ್ತ ಪೀಠೋಪಕರಣಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಬಾರಿ ವಿದ್ಯಾರ್ಥಿಗಳು ಇಲಾಖೆಯ ಮಾರ್ಗಸೂಚಿಯಂತೆ ಗೋಡೆಗೆ ಅಭಿಮುಖವಾಗಿ ಕುಳಿತುಕೊಳ್ಳುವಂತೆ ವ್ಯವಸ್ಥೆ ಮಾಡಲಾಗಿದ್ದು ವಿಶೇಷ ರೀತಿಯಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಲಾಗಿದ್ದು, ಪರೀಕ್ಷೆಯನ್ನು ಸುಗಮವಾಗಿ ಪಾರದರ್ಶಕವಾಗಿ ಬರೆಯಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು. ನಕಲು ಮುಕ್ತವಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕು. ನಕಲು ಮಾಡಲು ಕೊಠಡಿ ಮೇಲ್ವಿಚಾರಕರು ಅವಕಾಶ ಮಾಡಿಕೊಡಬಾರದು ಅಂತಹ ದೂರುಗಳೇನಾದರೂ ಬಂದರೆ ತಕ್ಷಣ ಸೂಕ್ತ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸೀತಾರಾಮು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ಪರೀಕ್ಷಾ ಕೇಂದ್ರಗಳ ವಿವರ:*
ಕೆ.ಆರ್.ಪೇಟೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು, ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್, ಅಕ್ಕಿಹೆಬ್ಬಾಳು ಸರ್ಕಾರಿ ಪದವಿ ಪೂರ್ವ ಕಾಲೇಜು, ಬೂಕನಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತೇಬಾಚಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಕಿಕ್ಕೇರಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಸೇರಿದಂತೆ ಈ ಬಾರಿ 3 ಪರೀಕ್ಷಾ ಕೇಂದ್ರಗಳನ್ನು ಕಡಿತ ಮಾಡಿ 6 ಪರೀಕ್ಷಾ ಕೇಂದ್ರಗಳಿಗೆ ಸೀಮಿತಗೊಳಿಸಲಾಗಿದೆ ಎಂದು ತಿಳಿಸಿದರು.
What's Your Reaction?






