ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಆಸ್ತಿತ್ವದಲ್ಲಿ ಇರಲ್ಲ. ಅಪ್ಪ ಮಕ್ಕಳನ್ನು ತಿರಸ್ಕರಿಸಿ. ರಾಜ್ಯದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಲು ಮುಖ್ಯ ಮಂತ್ರಿ ಸಿದ್ದರಾಮಯ್ಯ ಮನವಿ

ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಆಸ್ತಿತ್ವದಲ್ಲಿ ಇರಲ್ಲ. ಅಪ್ಪ ಮಕ್ಕಳನ್ನು ತಿರಸ್ಕರಿಸಿ. ರಾಜ್ಯದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಲು ಮುಖ್ಯ ಮಂತ್ರಿ ಸಿದ್ದರಾಮಯ್ಯ ಮನವಿ

ಬಡಜನರ ಕಲ್ಯಾಣಕ್ಕಾಗಿ ಅನುಷ್ಠಾನಗೊಳಿಸಿರುವ ಗ್ಯಾರಂಟಿ ಕಾರ್ಯಕ್ರಮಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲಾ, ಸ್ವಾರ್ಥ ಸಾಧನೆಗಾಗಿ ಕೋಮುವಾದಿ ಪಕ್ಷದ ಜೊತೆ ಕೈಜೋಡಿಸಿರುವ ಜೆಡಿಎಸ್ ಅಭ್ಯರ್ಥಿ ಕುಮಾರಸ್ವಾಮಿ ಅವರನ್ನು ಸೋಲಿಸಿ ಜಿಲ್ಲೆಯ ಮಗನಾದ ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಿ ಗೆಲ್ಲಿಸಿ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಮುಗಿದು ಮನವಿ ಮಾಡಿದರು.

ಅವರು ಕೆ. ಆರ್. ಪೇಟೆ ಪಟ್ಟಣದ ಪುರಸಭಾ ಮೈದಾನದಲ್ಲಿ ಮಂಡ್ಯ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರ ಪರವಾಗಿ ಆಯೋಜಿಸಿದ್ದ ಬೃಹತ್ ಪ್ರಚಾರ ಸಭೆಯನ್ನು ಉದ್ಘಾಟಿಸಿ ಕಾಂಗ್ರೆಸ್ ಅಭ್ಯರ್ಥಿ ಪರ ಮಾತಯಾಚನೆ ಮಾಡಿ ಮಾತನಾಡಿದರು.

ಬಸವಾಧಿ ಶರಣರ ತತ್ವ ಸಂದೇಶಗಳನ್ನು ಪಾಲಿಸುತ್ತಿರುವ ಕಾಂಗ್ರೆಸ್ ಪಕ್ಷವು ಕಳೆದ ವಿಧಾನಸಭಾ ಚುನಾವಣೆಯ ಸಂಧರ್ಭದಲ್ಲಿ ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ರಾಜ್ಯದ ಮೂರುವರೆ ಕೋಟಿ ಕುಟುಂಬಗಳು ತಿಂಗಳಿಗೆ ನಾಲ್ಕು ಸಾವಿರದಿಂದ ಐದು ಸಾವಿರ ರೂಪಾಯಿಗಳವರೆಗೆ ಸರ್ಕಾರದಿಂದ ಸಹಾಯ ಪಡೆಯುತ್ತಿವೆ. ಅಧಿಕಾರದಲಿದ್ದಾಗ ಯಾವುದೇ ಜಾನಪರವಾದ ಕೆಲಸ ಮಾಡದ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಜನತೆಯ ಶೋಷಣೆ ಮಾಡಿ ವಂಚಿಸಿವೆ. ಪ್ರಧಾನಿ ನರೇಂದ್ರ ಮೋಧಿ ಅವರು ಕಳೆದ 10ವರ್ಷಗಳಿಂದ ಸುಳ್ಳು ಹೇಳುತ್ತಾ ಭಾವನಾತ್ಮಕ ವಿಚಾರಗಳನ್ನು ಪ್ರಸ್ತಾಪ ಮಾಡುತ್ತಾ ಚುನಾವಣೆಯ ಸಂಧರ್ಭದಲ್ಲಿ ಮಾತ್ರ ರಾಜ್ಯವನ್ನು ನೆನೆದುಕೊಂಡು ರೋಡ್ ಶೋ ಮಾಡಲು ಮತಪ್ರಚಾರ ಮಾಡಲು ಮಾತ್ರ ರಾಜ್ಯಕ್ಕೆ ಬರುತ್ತಿದ್ದಾರೆ. ಜಾತ್ಯತೀತ ಜನತಾದಳ ಎಂದು ಹೆಸರಿಟ್ಟುಕೊಂಡಿರುವ ಜೆಡಿಎಸ್ ಪಕ್ಷವು ಕೋಮುವಾದಿ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡು ಸ್ಪರ್ಧೆ ಮಾಡಿರುವುದರಿಂದ ಜಾತ್ಯತೀತ ಎಂಬ ಪದವನ್ನು ತೆಗೆದು ಹಾಕಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು. ಲೋಕಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಜೆಡಿಎಸ್ ಪಕ್ಷವು ಅಸ್ತಿತ್ವದಲ್ಲಿ ಇರುವುದಿಲ್ಲ ಆದ್ದರಿಂದ ಬಡವರ ಪರವಾಗಿ ಕೆಲಸ ಮಾಡುತ್ತಿರುವ ಕೊಟ್ಟ ಮಾತಿನಂತೆ ನಡೆದು ಜನಪರವಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿರುವ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ, ಜಿಲ್ಲೆ ಹಾಗೂ ರಾಜ್ಯದ ಸಮಗ್ರವಾದ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಿ ಎಂದು ಸಿದ್ದರಾಮಯ್ಯ ಮನವಿ ಮಾಡಿದರು.

ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಮಾತನಾಡಿ ಸ್ವಾರ್ಥ ಸಾಧನೆ ಮಾಡುತ್ತಿರುವ ಅಪ್ಪ ಮಕ್ಕಳ ಪಕ್ಷವು ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಇರುವುದಿಲ್ಲ. ಹಾಸನದಲ್ಲಿ ಪ್ರಜ್ವಲ್ ಸೋಲು ಖಚಿತ, ಮಂಡ್ಯದಲ್ಲಿ ಕುಮಾರಸ್ವಾಮಿ ಸೋಲುವುದು ನಿಶ್ಚಿತ, ಬೆಂಗಳೂರು ಗ್ರಾಮಾಂ ತರದಲ್ಲಿ ಡಾ. ಮಂಜುನಾಥ್ ಸೋಲುವುದು ಖಚಿತ ಎಂದು ಭವಿಷ್ಯ ನುಡಿದ ಡಿ.ಕೆ. ಶಿವಕುಮಾರ್ ಅಧಿಕಾರದಲ್ಲಿದ್ದಾಗ ಯಾವುದೇ ಅಭಿವೃದ್ಧಿ ಕೆಲಸ ಮಾಡದ ಅಪ್ಪ ಮಕ್ಕಳು ಕಾಂಗ್ರೆಸ್ ಪಕ್ಷದ ಸಹಾಯ ಪಡೆದು ಮುಖ್ಯ ಮಂತ್ರಿ, ಪ್ರಧಾನ ಮಂತ್ರಿ ಯಾದರು. ಪ್ರಸ್ತುತ ರಾಜ್ಯ ಸಭೆಯ ಸದಸ್ಯರಾಗಿರುವ ದೇವೇಗೌಡರು ತಮ್ಮ ಮಿತ್ರ ನರೇಂದ್ರ ಮೋದಿಜಿ ಅವರಿಗೆ ತಿಳಿಸಿ ರಾಜ್ಯದ ಪಾಲಿನ ತೆರಿಗೆ ಹಣವನ್ನು ಕೊಡಿಸಲಿಲ್ಲ. ಸಂಸತ್ತಿನಲ್ಲಿ ರಾಜ್ಯದ ಪರವಾಗಿ ಮಾತನಾಡಲಿಲ್ಲ. ಅಧಿಕಾರದಲ್ಲಿ ಇಲ್ಲದವರು ಹೇಗೆ ರಾಜ್ಯದ ಅಭಿವೃದ್ಧಿ ಮಾಡುತ್ತಾರೆ. ಅಪ್ಪ ಮಕ್ಕಳ ಕಣ್ಣೀರಿನ ನಾಟಕಕ್ಕೆ ಮರುಳಾಗದೆ ರಾಜ್ಯದ ಅಭಿವೃದ್ಧಿ ಹಾಗೂ ಬಡ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಸರ್ವರಿಗೂ ಕ್ಷೇಮವನ್ನು ಬಯಸುವ ಪಕ್ಷವಾಗಿದ್ದು ರಾಷ್ಟ್ರದ ಸಮಗ್ರತೆ ಹಾಗೂ ಏಕತೆಗಾಗಿ ದುಡಿಯುತ್ತಿರುವ, ಸರ್ವ ಜನಾಂಗದ ಶಾಂತಿಯ ತೋಟದ ಹೊಂಗನಸು ಹೊತ್ತಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಸ್ಟಾರ್ ಚಂದ್ರು ಅವರನ್ನು ಗೆಲ್ಲಿಸಿ ರಾಜ್ಯದ ರೈತರ ಹಿತವನ್ನು ಕಡೆಗಣಿಸಿ ತಮ್ಮ ಮನೆಮಕ್ಕಳ ಉದ್ಧಾರಕ್ಕಾಗಿ ಇಟ್ಟುಕೊಂಡಿರುವ ಜೆಡಿಎಸ್ ಹಾಗೂ ಕೋಮುವಾದಿ ಬಿಜೆಪಿ ಪಕ್ಷವನ್ನು ತಿರಸ್ಕರಿಸಿ ಕಾಂಗ್ರೆಸ್ ಗೆಲ್ಲಿಸಿ, ಕೆ.ಆರ್.ಪೇಟೆ ವಿಧಾನ ಸಭಾ ಕ್ಷೇತ್ರದಿಂದ ಕನಿಷ್ಠ 25ಸಾವಿರ ಮತಗಳ ಲೀಡ್ ಕೊಡಬೇಕು ಎಂದು ಕರೆ ನೀಡಿದ ಡಿಕೆಶಿ ಕಮಲ ನೀರಿನಲ್ಲಿದ್ದರೆ ಚಂದ, ಬತ್ತದ ತೆನೆಯು ಗದ್ದೆಯಲ್ಲಿದ್ದರೆ ಚಂದ, ಬಡ ಜನರ ಕಲ್ಯಾಣಕ್ಕಾಗಿ ದುಡಿಯುವ ಕೈ ಅಧಿಕಾರದಲ್ಲಿದ್ದರೆ ಚಂದವಾದ್ದರಿಂದ ಜಿಲ್ಲೆಯ ಜನತೆ ಮಂಡ್ಯ ಸೇರಿದಂತೆ ರಾಜ್ಯದ ಸಮಗ್ರವಾದ ಅಭಿವೃದ್ಧಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸಿ ದೇಶದಲ್ಲಿ ಇಂಡಿಯಾ ಒಕ್ಕೂಟವು ಅಧಿಕಾರಕ್ಕೆ ಬರಲು ಪಣ ತೊಡಬೇಕು ಎಂದು ಕರೆ ನೀಡಿದರು.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯ ಸ್ವಾಮಿ, ರಾಜ್ಯದ ಮಾಜಿ ಸಚಿವ ಬಿ.ಸೋಮಶೇಖರ್, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ. ನಾಗೇಂದ್ರ ಕುಮಾರ್, ಹರಳಹಳ್ಳಿ ವಿಶ್ವನಾಥ್, ಕೆಪಿಸಿಸಿ ಸದಸ್ಯ ಕಿಕ್ಕೇರಿ ಸುರೇಶ್, ಕಾಂಗ್ರೆಸ್ ನಾಯಕರಾದ ಬಿ. ಎಲ್.ದೇವರಾಜು, ವಿಜಯ್ ರಾಮೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಸಭೆಯಲ್ಲಿ ಮಾತನಾಡಿದರು.

ಸಭೆಯಲ್ಲಿ ಮಾಜಿ ಸಚಿವ ಪಿ. ಎಂ.ನರೇಂದ್ರಸ್ವಾಮಿ, ಮಾಜಿ ಶಾಸಕ ಬಿ. ಪ್ರಕಾಶ್, ಮಂಡ್ಯ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಸುರೇಶ್, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಶೀಳನೆರೆ ಅಂಬರೀಶ್, ಜಿ.ಪಂ ಮಾಜಿ ಸದಸ್ಯರಾದ ಕೊಡಗಹಳ್ಳಿ ಮಂಜೇಗೌಡ, ಕೊಡಿಮಾರನಹಳ್ಳಿ ದೇವರಾಜು, ಲೋಹಿಯಾ ವಿಚಾರವಾದಿ ವೇದಿಕೆಯ ಅಧ್ಯಕ್ಷ ಮಳವಳ್ಳಿ ಶಿವಣ್ಣ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯರಾದ ಲೋಲಾಕ್ಷಿ, ಕೆ. ಬಿ.ಪ್ರತಿಮಾ, ಆದಿಹಳ್ಳಿ ಮೀನಾಕ್ಷಿ ಸೇರಿದಂತೆ 15 ಸಾವಿರಕ್ಕೂ ಹೆಚ್ಚಿನ ಜನರು ಸಭೆಯಲ್ಲಿ ಭಾಗವಹಿಸಿದ್ದರು.

 *ಇದೇ ಸಂಧರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಶೀಳನೆರೆ ಅಂಬರೀಶ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಪುರಸಭೆಯ ಹಿರಿಯ ಸದಸ್ಯ ಕೆ. ಸಿ.ಮಂಜುನಾಥ್ ಅವರನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಬೆನ್ನುತಟ್ಟಿ ಪ್ರೋತ್ಸಾಹಿಸಿದರು* .

ಕೆ.ಆರ್.ಪೇಟೆ ತಾಲೂಕು ಕಾಂಗ್ರೆಸ್ ಉಸ್ತುವಾರಿ ಇಂದಿರಾ ಸತೀಶ್ ಬಾಬು ಕಾರ್ಯಕ್ರಮ ನಡೆಸಿಕೊಟ್ಟರು. ಪುರಸಭಾ ಸದಸ್ಯರಾದ ಪ್ರೇಮಕುಮಾರ್ ಮತ್ತು ಕೆ.ಸಿ.ಮಂಜುನಾಥ್ ವಂದೇ ಮಾತರಂ ಗೀತೆ ಹಾಡಿದರು.

 *ವರದಿ, ರಾಜು ಜಿಪಿ ಕಿಕ್ಕೇರಿ ಕೆ

ಆರ್ ಪೇಟೆ*

What's Your Reaction?

like

dislike

love

funny

angry

sad

wow