ಸಮಾಜ ಸೇವಕ ರಾಜ್ಯ ಆರ್.ಟಿ.ಓ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಅವರ ಹುಟ್ಟುಹಬ್ಬದ ಅಂಗವಾಗಿ

ಸಮಾಜ ಸೇವಕ ರಾಜ್ಯ ಆರ್.ಟಿ.ಓ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಅವರ ಹುಟ್ಟುಹಬ್ಬದ ಅಂಗವಾಗಿ

ಕೆ.ಆರ್.ಪೇಟೆ ತಾಲ್ಲೂಕಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ. ಗುರುವಂದನಾ ಕಾರ್ಯಕ್ರಮ. ಅದ್ದೂರಿಯಾಗಿ ನಡೆದ ಪೌರಾಣಿಕ ನಾಟಕ ಪ್ರದರ್ಶನ. ಮುಗಿಲು ಮುಟ್ಟಿದ ಸಂಭ್ರಮ. ಕೇಕ್ ಕತ್ತರಿಸಿ ಸಂಭ್ರಮಿಸಿದ ಯುವಕರು* .

ಸ್ವಾರ್ಥವೇ ತುಂಬಿರುವ ಇಂದಿನ ಸಮಾಜದಲ್ಲಿ ಸಮಾಜಮುಖಿಯಾಗಿ ಕೆಲಸ ಮಾಡುವ ಮಲ್ಲಿಕಾರ್ಜುನ ಅವರಂತಹ ಹೃದಯವಂತರು ಬೇಕಾಗಿದ್ದಾರೆ ಎಂದು ಕಾಗಿನೆಲೆ ಕನಕ ಗುರುಪೀಠದ ಕೆ.ಆರ್. ನಗರ ಶಾಖಾ ಮಠದ ಶ್ರೀ. ಶಿವಾನಂದಪುರಿ ಸ್ವಾಮೀಜಿ ಹೇಳಿದರು.

ಅವರು ಕೃಷ್ಣರಾಜಪೇಟೆ ಪಟ್ಟಣದಲ್ಲಿ ಆರ್.ಟಿ.ಓ ಮಲ್ಲಿಕಾರ್ಜುನ ಅಭಿಮಾನಿ ಬಳಗದ ವತಿಯಿಂದ ಮಲ್ಲಿಕಾರ್ಜುನ ಅವರ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ. ಮಾತನಾಡಿದರು.

ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಮಲ್ಲಿಕಾರ್ಜುನ ಅವರು ಪ್ರತಿಭಾ ಪುರಸ್ಕಾರ ನೀಡಿ ವಿದ್ಯಾರ್ಥಿಗಳಿಗೆ ತಮ್ಮ ಕೈಲಾದ ಸಹಾಯ ಮಾಡುವ ಮೂಲಕ ತಮ್ಮ ಹುಟ್ಟುಹಬ್ಬಕ್ಕೆ ಸಾರ್ಥಕತೆ ತಂದುಕೊಟ್ಟಿದ್ದಾರೆ ಎಂದು ಸ್ವಾಮೀಜಿ ಅಭಿಮಾನದಿಂದ ಹೇಳಿದರು. ಜಾಗತಿಕ ಜಗತ್ತಿನ ಇಂದಿನ ಸ್ಪರ್ಧಾ ಪ್ರಪಂಚದಲ್ಲಿ ಎದುರಾಗುವ ಜಾಗತಿಕ ಸವಾಲುಗಳು ಹಾಗೂ ಸ್ಪರ್ಧೆಗಳನ್ನು ಎದುರಿಸಿ ಮುನ್ನಡೆಯಲು ಯುವ ಜನರು ಆತ್ಮವಿಶ್ವಾಸದಿಂದ ಸಜ್ಜಾಗಬೇಕು, ಮನಸ್ಸಿದ್ದಲ್ಲಿ ಮಾರ್ಗವಿದೆ ಎಂಬ ಸತ್ಯ ಅರಿತು ಶ್ರದ್ಧಾ ಭಕ್ತಿಯಿಂದ ವ್ಯಾಸಂಗ ಮಾಡಿ ಗುರಿಸಾಧನೆ ಮಾಡಿ ತಂದೆ ತಾಯಿಗಳು ಮತ್ತು ಗುರು ಹಿರಿಯರಿಗೆ ಕೀರ್ತಿ ತರಬೇಕು ಎಂದು ಸ್ವಾಮೀಜಿ ಕರೆ ನೀಡಿದರು.

ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಸೀತಾರಾಮ್ ಮಾತನಾಡಿ ಆರ್.ಟಿ.ಓ ಮಲ್ಲಿಕಾರ್ಜುನ ಅವರು ಅನಗತ್ಯವಾಗಿ ದುಂದು ವೆಚ್ಚಮಾಡಿಕೊಂಡು ಹಣ ಪೋಲು ಮಾಡಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದೆ ವಿದ್ಯಾರ್ಥಿಗಳ ಸಂಭ್ರಮದಲ್ಲಿ ಭಾಗಿಯಾಗಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡು ಸಂಭ್ರಮಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಅಂಕಗಳಿಕೆಯೊಂದೆ ಮಾನದಂಡವಲ್ಲ ಆದ್ದರಿಂದ ವಿದ್ಯಾರ್ಥಿಗಳು ಶಿಕ್ಷಣದ ಜ್ಞಾನದ ಜೊತೆಗೆ ಲೋಕಜ್ಞಾನವನ್ನು ಅರಿತುಕೊಂಡು ಸಮಗ್ರವಾಗಿ ತಮ್ಮ ವ್ಯಕ್ತಿತ್ವವನ್ನು ಸಾಧನೆ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಹೇಮಗಿರಿ ಶಾಖಾ ಮಠದ ಕಾರ್ಯದರ್ಶಿ ಡಾ.ಜೆ.ಎನ್. ರಾಮಕೃಷ್ಣೆಗೌಡ ಮಾತನಾಡಿ ಮಲ್ಲಿಕಾರ್ಜುನ ಅವರಂತಹ ಪ್ರಾಮಾಣಿಕ ಕಳಕಳಿ ಹೊಂದಿರುವ ದಕ್ಷ ಅಧಿಕಾರಿಗಳು ಇಂದಿನ ಸಮಾಜಕ್ಕೆ ಬೇಕಾಗಿದ್ದಾರೆ. ಸರಳತೆ, ಸಜ್ಜನಿಕೆ, ಬಡ ಜನರು ಹಾಗೂ ವಿದ್ಯಾರ್ಥಿಗಳ ಬಗ್ಗೆ ಹೊಂದಿರುವ ಕಾಳಜಿ ಹೊಂದಿರುವ ಜನರು ವಿರಳವಾಗುತ್ತಿರುವ ಸಮಯದಲ್ಲಿ ಮಲ್ಲಿಕಾರ್ಜುನ ಅವರು ಬೆಳ್ಳಿ ಚುಕ್ಕಿಯಂತೆ ಪ್ರಜ್ವಲಿಸುತ್ತಿದ್ದಾರೆ. ಸಮಾಜ ಸೇವಾ ಚಟುವಟಿಕೆಗಳ ಮೂಲಕ ಕೆ.ಆರ್.ಪೇಟೆ ತಾಲೂಕಿನಲ್ಲಿ ಜನಪ್ರಿಯರಾಗಿರುವ ಮಲ್ಲಿಕಾರ್ಜುನ ವಿದ್ಯಾರ್ಥಿಗಳೊಂದಿಗೆ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಿ ಗ್ರಾಮೀಣ ವಿದ್ಯಾರ್ಥಿಗಳ ನೈಜ ಪ್ರತಿಭೆಯನ್ನು ಪ್ರೋತ್ಸಾಹಿಸಿ ಸಂಭ್ರಮಿಸುತ್ತಿದ್ದಾರೆ. ಮಲ್ಲಿಕಾರ್ಜುನ ಅವರಂತಹ ಆದರ್ಶ ವ್ಯಕ್ತಿತ್ವ ಹೊಂದಿರುವ ಜನರು ಇಂದಿನ ಸಮಾಜಕ್ಕೆ ಅವಶ್ಯಕವಾಗಿ ಬೇಕಾಗಿದ್ದಾರೆ ಎಂದು ತಿಳಿಸಿ ಶ್ರೀ ಮಠದ ವತಿಯಿಂದ ಸನ್ಮಾನಿಸಿ ಗೌರವಿಸಿದರು.

ವ್ಯಕ್ತಿತ್ವ ವಿಕಾಸನ ಮಾರ್ಗದರ್ಶಕ ಶಂಕರ್ ಬೆಳ್ಳೂರು, ವಿಭಾಗಿಯ ಸಾರಿಗೆ ಅಧಿಕಾರಿ ಸಿ.ಟಿ.ಮೂರ್ತಿ, ಕಾಗಿನೆಲೆ ಮಠದ ಅರುಣ ಸಿದ್ದೇಶ್ವರ ಸ್ವಾಮೀಜಿ, ಕಾಪನಹಳ್ಳಿ ಗವಿಮಠದ ಶ್ರೀ ಸ್ವತಂತ್ರ ಚನ್ನವೀರಯ್ಯ ಸ್ವಾಮೀಜಿ, ಬೇಬಿ ಬೆಟ್ಟದ ಶ್ರೀ ಶಿವಬಸವ ಸ್ವಾಮೀಜಿ, ತೆಂಡೆಕೆರೆ ಬಾಳೆಹೊನ್ನೂರು ಶಾಖಾ ಮಠದ ಶ್ರೀ ಗಂಗಾಧರ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸೀತಾರಾಮ್, ಮಂಡ್ಯ ಆರ್.ಟಿ.ಓ ಹೇಮಾವತಿ, ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಚೀಫ್ ಎಂಜಿನಿಯರ್ ರಮೆಂದ್ರ, ಟೊಯೋಟಾ ಕಿರ್ಲೊಸ್ಕರ್ ಕಂಪನಿಯ ಎಂಜಿನಿಯರ್ ರಮೇಶ್, ಮುಖಂಡರಾದ ಮಯೂರ್, ಶರತ್ ಚಂದ್ರ ಹೆಗಡೆ, ರಾಘವೇಂದ್ರ ಪ್ರಸಾದ್, ಕಂಟ್ರಾಕ್ಟರ್ ಚನ್ನೇಗೌಡ, ಉಧ್ಯಮಿ ಕೆ.ಸುರೇಶ್, ಮಹಾರಾಷ್ಟ್ರ ಕುರುಬರ ಸಂಘದ ಅಧ್ಯಕ್ಷ ಯೋಗೇಶ್ ಗೌಡ, ಆದಿಹಳ್ಳಿ ರಮೇಶ್, ಮಿಲಿಟರಿ ಸುಕುಮಾರ್, ಬಸ್ತಿ ರಂಗಪ್ಪ ಸೇರಿದಂತೆ ಸಾವಿರಾರು ಜನರು ಮಲ್ಲಿಕಾರ್ಜುನ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದರು.

ಪಟ್ಟಣದ ಸೈ ಮತ್ತು ಸಾನ್ವಿ ನೃತ್ಯ ಶಾಲೆಯ ಮಕ್ಕಳು ನೀಡಿದ ಆಕರ್ಷಕ ನೃತ್ಯ ಪ್ರದರ್ಶನವು ಸಾರ್ವಜನಿಕರನ್ನು ರಂಜಿಸಿತು.

ಪಂಡಿತ ಪಂಚಾಕ್ಷರಿ ಗಾನಯೋಗಿ ತಂಡದ ಶ್ರೀಕಾಂತ್ ಚಿಮ್ಮಲ್ ಮತ್ತು ರವಿಶಿವಕುಮಾರ್ ನೇತೃತ್ವದ ತಂಡವು ನೀಡಿದ ಸುಗಮ ಸಂಗೀತ ಕಾರ್ಯಕ್ರಮ ಮನಸೂರೆಗೊಂಡಿತು.

 *ವರದಿ,ರಾಜು ಜಿಪಿ ಕಿಕ್ಕೇರಿ ಕೆ ಆರ್ ಪೇಟೆ*

What's Your Reaction?

like

dislike

love

funny

angry

sad

wow