ರಾಜ್ಯದ ಜನರ ಹಿತವನ್ನು ಕಡೆಗಣಿಸಿ ಭಾರಿ ಭ್ರಷ್ಟಾಚಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳ ನೇತೃತ್ವದಲ್ಲಿ ನಡೆಯುತ್ತಿರುವ ಬೃಹತ್ ಪಾದ ಯಾತ್ರೆಯಲ್ಲಿ ಭಾಗವಹಿಸಲು ಮಾಜಿ ಸಚಿವ ನಾರಾಯಣಗೌಡ ಮನವಿ

ರಾಜ್ಯದ ಜನರ ಹಿತವನ್ನು ಕಡೆಗಣಿಸಿ ಭಾರಿ ಭ್ರಷ್ಟಾಚಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳ ನೇತೃತ್ವದಲ್ಲಿ ನಡೆಯುತ್ತಿರುವ ಬೃಹತ್ ಪಾದ ಯಾತ್ರೆಯಲ್ಲಿ ಭಾಗವಹಿಸಲು ಮಾಜಿ ಸಚಿವ ನಾರಾಯಣಗೌಡ ಮನವಿ

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಜೆಡಿಎಸ್ ವರಿಷ್ಟ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಆಗಸ್ಟ್ 3ರಿಂದ ಬೆಂಗಳೂರಿನಿಂದ ಮೈಸೂರಿಗೆ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ಪಾದಯಾತ್ರೆಯಲ್ಲಿ ಕೆ.ಆರ್.ಪೇಟೆ ತಾಲ್ಲೂಕಿನಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ದ ಜನಾಂದೋಲನ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ನಿರಂತರವಾಗಿ ಹೋರಾಟ ನಡೆಸಲು

ಸಜ್ಜಾಗಬೇಕು ಎಂದು ಮನವಿ ಮಾಡಿದ ನಾರಾಯಣಗೌಡ ಮೈಸೂರು ಮುಡಾದಲ್ಲಿ 4ಸಾವಿರ ಕೋಟಿಗೂ ಹೆಚ್ಚಿನ ಭ್ರಷ್ಟಾಚಾರ ನಡೆದಿದ್ದರೆ ಮಹರ್ಷಿ ವಾಲ್ಮೀಕಿ ನಿಗಮದಲ್ಲಿ 187ಕೋಟಿ ಭ್ರಷ್ಟಾಚಾರ ನಡೆದು ಮಂತ್ರಿ ನಾಗೇಂದ್ರ ಜೈಲಿಗೆ ಹೋಗಿದ್ದು ಕಂಬಿ ಎಣಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ನಾರಾಯಣಗೌಡ ಭ್ರಷ್ಟಾಚಾರದ ಪಿತಾಮಹ, ಡೋಂಗಿ ಸಮಾಜವಾದಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ನಿಸ್ಪಕ್ಷಪಾತವಾಗಿ ತನಿಖೆ ನಡೆಯಲು ಎರಡೂ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸಿ ಭ್ರಷ್ಟಾಚಾರದ ಕಳಂಕದಿಂದ ಹೊರಬರಬೇಕು ಎಂದು ಮಾಜಿ ಸಚಿವ ನಾರಾಯಣಗೌಡ ಆಗ್ರಹಿಸಿದರು. 

ಕೃಷ್ಣರಾಜಪೇಟೆ ತಾಲ್ಲೂಕು ಬಿಜೆಪಿ ಅಧ್ಯಕ್ಷ ಸಾರಂಗಿ ನಾಗಣ್ಣ, ಮೂಡ ಮಾಜಿ ಅಧ್ಯಕ್ಷ ಕೆ. ಶ್ರೀನಿವಾಸ್, ಜಿಲ್ಲಾ ಹಾಪ್ ಕಾಮ್ಸ್ ನಿರ್ದೇಶಕ ಕೆ. ಜಿ. ತಮ್ಮಣ್ಣ, ಬಿಜೆಪಿ ರಾಜ್ಯ ಎಸ್ ಟಿ ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾದ ಮಹೇಶ್ ನಾಯಕ, ಬಿಜೆಪಿ ಜಿಲ್ಲಾ ಓಬಿಸಿ ಮೋರ್ಚಾದ ಕಾರ್ಯದರ್ಶಿ ವಾಸು, ಬಿಜೆಪಿ ತಾಲ್ಲೂಕು ಉಪಾಧ್ಯಕ್ಷ ಭಾರತೀಪುರ ಪುಟ್ಟಣ್ಣ, ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮಿ, ನಗರ ಬಿಜೆಪಿ ಅಧ್ಯಕ್ಷೆ ಚಂದ್ರಕಲಾ ರಮೇಶ್, ಕಾರ್ಯದರ್ಶಿ ಶಿಲ್ಪಾ,

ಚೋಕನಹಳ್ಳಿ ಪ್ರಕಾಶ್, ಸಿಂಗನಹಳ್ಳಿ ರವಿಕುಮಾರ್, ಬಿಜೆಪಿ ತಾಲೂಕು ಎಸ್ ಟಿ ಮೋರ್ಚಾದ ಅಧ್ಯಕ್ಷರಾದ ರಾಜು ಜಿ ಪಿ, ಬಿಜೆಪಿ ತಾಲೂಕು ಓಬಿಸಿ ಮೋರ್ಚದ ಅಧ್ಯಕ್ಷರಾದ ಆದ್ನೂರ್ ಮಂಜು, ಬಿಜೆಪಿ ತಾಲೂಕು ಎಸ್ ಸಿ ಮೋರ್ಚಾದ ಅಧ್ಯಕ್ಷರಾದ ಯಾಲಕಯ್ಯ, ಬಿಜೆಪಿ ತಾಲೂಕು ಯುವ ಮೋರ್ಚ್ ಅಧ್ಯಕ್ಷರಾದ ಐಕನಳ್ಳಿ ರಾಜು, ಮೋದಿ ಸುರೇಶ್, ತಾಲೂಕು ಓಬಿಸಿ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಮೂರ್ತಿ, ಕೆ.ವಿನೋದ್, ಮಾಧ್ಯಮ ವಕ್ತಾರಾ ಬೂಕನಕೆರೆ ಮಧುಸೂದನ್, ರಾಜೇ ಗೌಡ, ಅಗ್ರಹಾರಬಾಚಹಳ್ಳಿ ಜಗಧೀಶ್ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.

What's Your Reaction?

like

dislike

love

funny

angry

sad

wow