ಮೈಸೂರಿನ ಮೂಡಾ ನಿವೇಶನಗಳ ಹಗರಣದಲ್ಲಿ ಯಾವುದೇ ತಪ್ಪು ಮಾಡದ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರಕ್ಕೆ ಹೆದರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬಾರದು. ಡಾ. ಮಾದೇಶ್ ಗುರೂಜಿ ಮನವಿ*.
ಜೆಡಿಎಸ್-ಬಿಜೆಪಿ ಪಕ್ಷಗಳು ರಾಜ ಭವನವನ್ನು ದುರುಪಯೋಗ ಪಡಿಸಿಕೊಂಡು ಕುತಂತ್ರ ರಾಜಕಾರಣ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಶನ್ ನಡೆಸಲು ರಾಜ್ಯಪಾಲರು ಅನುಮತಿ ನೀಡಿರುವ ಕ್ರಮವು ಸಂವಿಧಾನ ವಿರೋಧಿಯಾಗಿದೆ ಎಂದು ಹುಣಸೂರು ತಾಲೂಕಿನ ದೇವರೂರಿನ ಮಾನವ ಧರ್ಮ ಪೀಠದ ಪೀಠಾಧಿಪತಿ ಸನಾತನ ಧರ್ಮರತ್ನಾಕರ ಶ್ರೀ ಮಾದೇಶ್ ಗುರೂಜಿ ಅಭಿಪ್ರಾಯಪಟ್ಟರು.
ಅವರು ಕೃಷ್ಣರಾಜಪೇಟೆ ತಾಲೂಕಿನ ಬೆಡದಹಳ್ಳಿಯ ಶ್ರೀ ಪಂಚಭೂತೇಶ್ವರ ಮಠದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.
*ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕಿಇಲ್ಲದಂತೆ ಇಡೀ ದೇಶವೇ ಮೆಚ್ಚುವಂತೆ ದಕ್ಷ ಪ್ರಾಮಾಣಿಕ ಆಡಳಿತ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯಕ್ಕೆ ಕಳಂಕ ತರಲು ಹೊರಟಿರುವ ಬಿಜೆಪಿ -ಜೆಡಿಎಸ್ ರಾಜಕೀಯ ಪಕ್ಷಗಳು ಕೇಂದ್ರದ ಮೇಲೆ ಒತ್ತಡ ಹಾಕಿ ರಾಜ್ಯಪಾಲರನ್ನು ಕೈಗೊಂಬೆ ಮಾಡಿಕೊಂಡು ಯಾವುದೇ ತಪ್ಪು ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವ ಕ್ರಮವು ಸೇಡಿನ ರಾಜಕಾರಣವಾಗಿದೆ. ಆದ್ದರಿಂದ ರಾಜ್ಯಪಾಲರು ಪ್ರಾಸಿಕ್ಯೂಶನ್ ನಡೆಸಲು ನೀಡಿರುವ ಅನುಮತಿಯನ್ನು ವಾಪಸ್ ಪಡೆಯುವ ಮೂಲಕ ಪ್ರಜಾತಂತ್ರದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು. ಯಾವುದೇ ತಪ್ಪು ಮಾಡದ ರಾಜ್ಯದ ಹಿಂದುಳಿದ ವರ್ಗಗಳ ಧೀಮಂತ ನಾಯಕರಾದ ಸಿದ್ದರಾಮಯ್ಯ ಅವರು ಯಾಕೆ ಪ್ರಾಸಿಕ್ಯೂಶನ್ ಗೆ ಒಳಪಡಬೇಕು. ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬಾರದು ಎಂದು ಡಾ.ಮಾದೇಶ್ ಗುರೂಜಿ ಮನವಿ ಮಾಡಿದರು*.
ಸತ್ಯ ಯಾವತ್ತಿದ್ದರೂ ಸತ್ಯವೇ ಹೊರತು ಸುಳ್ಳಾಗುವುದಿಲ್ಲ. ರಾಜ್ಯದಲ್ಲಿ ಜೆಡಿಎಸ್ ಬಿಜೆಪಿ ಪಕ್ಷಗಳು ನಡೆಸುತ್ತಿರುವ ಕುತಂತ್ರ ರಾಜಕಾರಣವನ್ನು ಇಡೀ ದೇಶವೇ ನೋಡುತ್ತಿದೆ. ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಅಂದಿನ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವ ಕಾರಣವೇ ಬೇರೆ ನೇರವಾಗಿ ಚೆಕ್ ಮೂಲಕ ಕಮಿಷನ್ ಹಣ ಪಡೆದು ಸಿಕ್ಕಿಬಿದ್ದು, ಆರೋಪವು ಸಾಭಿತಾಗಿ ಜೈಲಿಗೆ ಹೋಗಿದ್ದೆ ಬೇರೆ ಪ್ರಕರಣವಾದರೆ, ಸಿದ್ದರಾಮಯ್ಯ ಅವರು ಮೂಡಾ'ದಲ್ಲಿ ಅಕ್ರಮ ನಡೆಸಿರುವುದಕ್ಕೆ ಯಾವುದೇ ರೀತಿಯ ಸಾಕ್ಷಿ ಪುರಾವೆಗಳಿಲ್ಲ ಆದ್ದರಿಂದ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ನೀಡಿರುವ ಅನುಮತಿಯನ್ನು ವಾಪಸ್ ಪಡೆಯುವ ಮೂಲಕ ಪ್ರಜಾತಂತ್ರ ಹಾಗೂ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿದು ರಾಜ್ಯಪಾಲ ಸ್ಥಾನದ ಘನತೆಯನ್ನು ಉಳಿಸಲು ಮುಂದಾಗಬೇಕು ಎಂದು ಡಾ.ಮಾದೇಶ್ ಗುರೂಜಿ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಳವಳ್ಳಿ ಯ ಶ್ರೀ ಸಿದ್ದರಾಮ ಸತ್ಯ ಪೀಠದ ಪೀಠಾಧಿಪತಿ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ, ಬೆಡದಹಳ್ಳಿಯ ಶ್ರೀ ಪಂಚಭೂತೇಶ್ವರ ಮಠದ ಶ್ರೀ ರುದ್ರಮುನಿ ಸ್ವಾಮೀಜಿ ಉಪಸ್ಥಿತರಿದ್ದರು.
What's Your Reaction?