*ಕೆ.ಆರ್.ಪೇಟೆ: ಕನ್ನಡ ನಾಡು ನುಡಿ ಭಾಷೆಗೆ ತನ್ನದೆಯಾದ ಶ್ರೀಮಂತಿಕೆ ಇದ್ದು ಕನ್ನಡಿಗರೆಲ್ಲರೂ ಒಗ್ಗಟ್ಟಿನಿಂದ ಕನ್ನಡ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಲು ಹಾಗೂ ಬೆಳೆಸಿಕೊಂಡು ಹೋಗಲು ಶ್ರಮಿಸಬೇಕು ಎಂದು ಶಾಸಕ ಹೆಚ್.ಟಿ ಮಂಜು ಕರೆ ನೀಡಿದರು

*ಕೆ.ಆರ್.ಪೇಟೆ: ಕನ್ನಡ ನಾಡು ನುಡಿ ಭಾಷೆಗೆ ತನ್ನದೆಯಾದ ಶ್ರೀಮಂತಿಕೆ ಇದ್ದು ಕನ್ನಡಿಗರೆಲ್ಲರೂ ಒಗ್ಗಟ್ಟಿನಿಂದ ಕನ್ನಡ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಲು ಹಾಗೂ ಬೆಳೆಸಿಕೊಂಡು ಹೋಗಲು ಶ್ರಮಿಸಬೇಕು ಎಂದು ಶಾಸಕ ಹೆಚ್.ಟಿ ಮಂಜು ಕರೆ ನೀಡಿದರು

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೋಗಾಧಿ ಗ್ರಾಮದ ಮೂಲಕ ಕೆ.ಆರ್.ಪೇಟೆ ತಾಲ್ಲೂಕಿನ ರಂಗನಾಥಪುರ ಕ್ರಾಸ್ ಗ್ರಾಮ ಪಂಚಾಯಿತಿಯನ್ನು ಪ್ರವೇಶಿಸಿದ ಕನ್ನಡ ಜಾಗೃತಿ ರಥವನ್ನು ತಾಲ್ಲೂಕು ಆಡಳಿತ,ಕಸಾಪ ಹಾಗೂ ವಿವಿಧ ಸಂಘಟನೆಗಳ ಅಧ್ಯಕ್ಷರು ಪದಾಧಿಕಾರಿಗಳು ಜೊತೆಗೂಡಿ ರಥವನ್ನು ಭವ್ಯ ಜಾನಪದ ಕಲಾತಂಡಗಳೊಂದಿಗೆ ಸ್ವಾಗತಿಸಿ ಮಾತನಾಡಿದರು.ಅಖಂಡ ಕರ್ನಾಟಕ ರಚನೆಗಾಗಿ ಡೆಪ್ಯೂಟಿ ಚೆನ್ನಬಸಪ್ಪ ಅವರ 1856ರಲ್ಲಿ ಕರ್ನಾಟಕ ಏಕೀಕರಣದ ಕನಸನ್ನು ಕಂಡು, ಚಳವಳಿ ಆರಂಭಿಸಿದರು. ಅದು ಹೆಮ್ಮರವಾಗಿ ಬೆಳೆದು 1956 ನ. 1ರಂದು ಏಕೀಕೃತ ಮೈಸೂರು ರಾಜ್ಯ ಉದಯವಾಯಿತು. ಮುಂದೆ 1973ರಲ್ಲಿ ಅಂದಿನ

ಮುಖ್ಯಮಂತ್ರಿ ಡಿ. ದೇವರಾಜ ಅರಸರು ರಾಜ್ಯಕ್ಕೆ ವಿಶಾಲಾರ್ಥದಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಿದರು ಎಂದು ನೆನೆದರು.ಕನ್ನಡ ನಾಡು ವಿವಿಧ ಧರ್ಮ ಮತ್ತು ಸಂಸ್ಕತಿಗಳ ಸಮಾಗಮವಾಗಿದೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧರು, ಜೈನರು, ಸಿಖ್ ಸೇರಿದಂತೆ ವಿವಿಧ ಧರ್ಮಿಯರು ಸೌಹಾರ್ದದಿಂದ ಬದುಕುತ್ತಿರುವ ನಾಡು ನಮ್ಮದು. ಅಂತೆಯೇ ದೇಶದಲ್ಲಿ ಅತ್ಯಂತ

ಶ್ರೀಮಂತ ಸಾಹಿತ್ಯ ಹೊಂದಿರುವ ಮತ್ತು ಶಾಸ್ತ್ರೀಯ ಭಾಷೆಯಾಗಿರುವ ಕನ್ನಡ ಸಾಹಿತ್ಯಕ್ಕೆ 8 ಜ್ಞಾನಪೀಠ ಪ್ರಶಸ್ತಿಗಳು ಸಂದಿರುವುದು ನಮ್ಮ ಭಾಷೆಯ ಶ್ರೀಮಂತಿಕೆಗೆ ಸಾಕ್ಷಿಯಾಗಿದೆ ಎಂದರು.ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು 50 ವರ್ಷ ಹೊಸ್ತಿಲಲ್ಲಿ ನಾಡಿನೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಕರ್ನಾಟಕ,ಉಸಿರಾಗಲಿ ಕನ್ನಡ ಎಂಬ ಹಿರಿಯರ ಘೋಷ ವಾಕ್ಯವು ನಮ್ಮಲ್ಲಿ ಸದಾ ಅನುರಣಿಸಬೇಕು. ಕನ್ನಡ ಭಾಷೆಯನ್ನು ಹೆಚ್ಚು ಬಳಸುತ್ತಾ, ಆಡಳಿತ ಭಾಷೆಯಾಗಿ ಸ್ವೀಕರಿಸುತ್ತಾ ಅದರ ಕೀರ್ತಿಯನ್ನು ಎತ್ತಿ ಹಿಡಿಯಬೇಕು. ಕನ್ನಡವೆಂದರೆ ನಮ್ಮ ಅಸ್ಮಿತೆ ಮತ್ತು ಸ್ವಾಭಿಮಾನ ಹೆಚ್ಚಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ತಾ.ಪಂ.ಇಓ ಸುಷ್ಮಾ, ತಹಸೀಲ್ದಾರ್ ಲೋಕೇಶ್,ತಾ.ಪಂ.ಸಹಾಯಕ ನಿರ್ದೇಶಕ ಡಾ.ನರಸಿಂಹರಾಜು,ರಾಜಸ್ವ ನಿರೀಕ್ಷಕ ಜ್ಞಾನೇಶ್, ರಂಗನಾಥಪುರ ಕ್ರಾಸ್ ಗ್ರಾ.ಪಂ.ಅಧ್ಯಕ್ಷೆ ಸಾವಿತ್ರಮ್ಮ, ಉಪಾಧ್ಯಕ್ಷೆ ಸುಧಾ,ಪಿಡಿಓ ಕೆ.ವಿನೋದ್, ತಾಲೂಕು ಕಸಾಪ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಶಾಂತವ್ವ ಗ್ರಾ.ಪಂ.ಉಪಾಧ್ಯಕ್ಷೆ ಸುನಿತಾದ್ಯಾವಯ್ಯ, ಪಿಡಿಓ

ಹರ್ಷವರ್ಧನ್, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಡಿ.ಎಸ್.ವೇಣು, ತಾಲ್ಲೂಕು ಕರವೇ ಅಧ್ಯಕ್ಷ ಎ.ಎಸ್.ಶ್ರೀನಿವಾಸ್, ತಾಲ್ಲೂಕು ಜಯಕರ್ನಾಟಕ ಸಂಘಟನೆಯ ಅಧ್ಯಕ್ಷ ಹೆಚ್.ಆರ್.ಸೋಮಶೇಖರ್, ಶಾಸಕರ ಆಪ್ತ ಸಹಾಯಕ ಅರಳಕುಪ್ಪೆ ಪ್ರತಾಪ್,ಸೇರಿದಂತೆ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು ಮುಖಂಡರು ಭಾಗವಹಿಸಿದ್ದರು.

What's Your Reaction?

like

dislike

love

funny

angry

sad

wow