ಕೆ.ಆರ್.ಪೇಟೆ: ಪಟ್ಟಣದಲ್ಲಿರುವ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಕಚೇರಿಯಲ್ಲಿ ಧನಲಕ್ಷ್ಮಿ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಲಕ್ಷ್ಮಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ, ತಾಲೂಕು ಯೋಜನಾ ಅಧಿಕಾರಿ ತಿಲಕ್ ರಾಜ್ ರವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು
ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆ ಧಾರ್ಮಿಕವಾಗಿ ಭಕ್ತಿ, ಭಾವನೆ ಜತೆ ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಸ್ವ ಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಆರ್ಥಿಕ ಬಲ ತುಂಬಿ, ಸಾಲ, ಸೌಲಭ್ಯಗಳ ಜತೆ ಸ್ವಂತ ಶಕ್ತಿಯ ಮೂಲಕ ಸ್ವಾವಲಂಬಿ ಜೀವನ ನಡೆಸಲು ಹತ್ತು ಹಲವು ಯೋಜನೆಗಳಿಂದ ಮಹಿಳೆಯರು ಸ್ವಾವಲಂಬಿ ಬದುಕು ನೆಡೆಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರಣವಾಗಿದೆ,
ಈ ಪೂಜಾ ಕಾರ್ಯಕ್ರಮದಲ್ಲಿ ಆರ್.ಟಿ.ಓ ನೌಕರರ ಸಂಘದ ರಾಜ್ಯಾಧ್ಯಕ್ಷರು,ಸಮಾಜ ಸೇವಕರಾದ ಮಲ್ಲಿಕಾರ್ಜುನ್, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ, ತಾಲೂಕು ಯೋಜನಾ ಅಧಿಕಾರಿ ತಿಲಕ್ ರಾಜ್,ಜಿಲ್ಲಾ ಜನ ಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯರಾದ ಕೆ.ಆರ್ ರಾಜೇಶ್, ಪದ್ಮಾವತಿ, ಜ್ಯೋತಿ,ಪುರಸಭಾ ಮಾಜಿ ಸದಸ್ಯ ಕೆ.ಆರ್ ನೀಲಕಂಠ, ಕಸಾಪ ಮಾಜಿ ಅಧ್ಯಕ್ಷ ಹರಿಚರಣ ತಿಲಕ್ ,ಹಿರಿಯ ಪತ್ರಕರ್ತರಾದ ಬಲ್ಲೆನಹಳ್ಳಿ ಮಂಜುನಾಥ್, ಆರ್.ಎಸ್.ಎಸ್ ಮಂಜುನಾಥ್, ಕರುನಾಡು ಯುವಜನ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಲೋಕೇಶ್.ವಿ
ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಅರುಣ್ ಕುಮಾರ್, ಮಾಧ್ಯಮ ಸ್ಟುಡಿಯೋ ಕಛೇರಿಯ ಸ್ನೇಹಿತರು, ರಾಜು ಜಿ ಪಿ, ಎಸ್ ರವಿ, ಲೋಕೇಶ್ ವಿ, ಸಾಯಿ ಕುಮಾರ್, ರಂಗನಾಥ,ಕರ್ನಾಟಕ ಸಂಪಾದಕರು ಮತ್ತು ವರದಿಗಾರರ ಸಂಘದ ತಾಲೂಕು ಅಧ್ಯಕ್ಷ ಸತೀಶ್, ಹಿಂದುಳಿದ ವರದಿಗಾರರ ಸಂಘದ ಅಧ್ಯಕ್ಷ ರಾಜೇಶ್,ಶ್ರೀ ಧರ್ಮಸ್ಥಳ ಸಂಘದ ಮೇಲ್ವಿಚಾರಕರು,ಸೇವಾಪ್ರತಿನಿಧಿಗಳು ಸೇರಿದಂತೆ ಉಪಸ್ಥಿತರಿದ್ದರು.
What's Your Reaction?