*ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ 03ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮವು ಇಂದು ರಾಜ್ಯದ ಮಾಜಿಸಚಿವ ಡಾ. ನಾರಾಯಣಗೌಡರ ನೇತೃತ್ವದಲ್ಲಿ ಅರ್ಥ ಪೂರ್ಣವಾಗಿ ನಡೆಯಿತು*.
ಕೆ.ಆರ್.ಪೇಟೆ ಪಟ್ಟಣದ ಮೈಸೂರು ಚನ್ನರಾಯಪಟ್ಟಣ ರಸ್ತೆಯ ಎಂ.ಕೆ.ಬೊಮ್ಮೇಗೌಡ ವೃತ್ತದಲ್ಲಿ ಮಾಜಿ ಸಚಿವ ಡಾ. ನಾರಾಯಣಗೌಡರ ಸಹಕಾರದಿಂದ ಎತ್ತರದ ಕಟ್ಟೆಯ ಮೇಲೆ ಪ್ರತಿಷ್ಟಾಪಿಸಿರುವ 06ಅಡಿ ಎತ್ತರದ ಪುನೀತ್ ರಾಜ್ ಕುಮಾರ್ ಕಂಚಿನ ಪ್ರತಿಮೆಗೆ ಆದಿಚುಂಚನಗಿರಿಯ ಹೇಮಗಿರಿ ಶಾಖಾ ಮಠದ ಗೌರವ ಕಾರ್ಯದರ್ಶಿ ಡಾ. ಜೆ.ಎನ್.ರಾಮಕೃಷ್ಣೆಗೌಡ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ. ಶ್ರೀನಿವಾಸ್, ಕಾಮಿಡಿ ಖಿಲಾಡಿಗಳು ಖ್ಯಾತಿಯ ಮಡೆನೂರು ಮನು, ಪುರಸಭೆ ಅಧ್ಯಕ್ಷೆ ಪಂಕಜಾ, ಮಾಜಿ ಶಾಸಕ ಡಾ.ನಾರಾಯಣಗೌಡ, ಕೃಷ್ಣರಾಜಪೇಟೆ ತಾಲೂಕು ಅಪ್ಪು ಯುವ ಸಾಮ್ರಾಜ್ಯ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಎಲ್. ಮಹೇಶ್, ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಸೋಮಶೇಖರ್ ವಿಶೇಷ ಪೂಜೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
ಮಾಜಿ ಸಚಿವ ಡಾ. ನಾರಾಯಣಗೌಡ ಅವರು ಪುನೀತ್ ಅಭಿಮಾನಿಗಳು ಹಾಗೂ ಸಾರ್ವಜನಿಕರನ್ನು ಉದ್ಧೇಶಿಸಿ ಮಾತನಾಡಿ ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನಗಲಿ ಮೂರು ವರ್ಷಗಳು ಕಳೆಯುತ್ತಿದ್ದರೂ ಅವರ ನೆನಪು ಇಂದಿಗೂ ಕನ್ನಡಿಗರ ಮನ ಹಾಗೂ ಮನೆಗಳಲ್ಲಿ ಚಿರಸ್ಥಾಯಿಯಾಗಿ ಇಂದಿಗೂ ಹಸಿರಾಗಿ ಉಳಿದಿದೆ. ತಮ್ಮ ತಂದೆಯವರಾದ ಕನ್ನಡದ ವರನಟ ಡಾ. ರಾಜಕುಮಾರ್ ಅವರಿಗೂ ಮೀರಿದ ಸಾಧನೆ ಮಾಡಿದ ಅಪ್ಪು ಅಭಿಮಾನಿಗಳು ನಡೆಸುತ್ತಿರುವ
ಸಾಮಾಜಿಕ ಕಾರ್ಯ ಚಟುವಟಿಕೆಗಳು ಚಿರ ಸ್ಥಾಯಿಯಾಗಿ ಉಳಿದಿವೆ. ಇಂದು ರಕ್ತದಾನ, ಆರೋಗ್ಯ ತಪಾಸಣೆ ಹಾಗೂ ಅನ್ನದಾನ ಕಾರ್ಯಕ್ರಮಗಳು ಶ್ರೀ ಸಾಮಾನ್ಯರ ಹೃದಯ ಗೆದ್ದಿವೆ ಎಂದು ನಾರಾಯಣಗೌಡ ಹೇಳಿದರು. ಇದೆ ಸಂದರ್ಭದಲ್ಲಿ ಕಾಮಿಡಿ ಖಿಲಾಡಿಗಳು ಖ್ಯಾತಿಯ ಮಡೆನೂರು ಮನು ಅಭಿನಯದ ಕುಲದಲ್ಲಿ ಕೀಳ್ಯಾವುದೋ ಕನ್ನಡ ಚಲನ ಚಿತ್ರದ ಪೋಸ್ಟರ್ ಅನ್ನು ಅತಿಥಿಗಳು ಬಿಡುಗಡೆ ಮಾಡಿದರು.
ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು ಸರತಿಯ ಸಾಲಿನಲ್ಲಿ ನಿಂತು ಅನ್ನ ಪ್ರಸಾದ ಸ್ವೀಕರಿಸಿದರು. ನೂರಕ್ಕೂ ಹೆಚ್ಚಿನ ಯುವ ಜನರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿ ಮಾದರಿಯಾದರು.
What's Your Reaction?