*69ನೇ ಕನ್ನಡ ರಾಜ್ಯೋತ್ಸವದ ಆಚರಣೆ:*

ಕೆ.ಆರ್.ಪೇಟೆ ಪಟ್ಟಣದ ನಾಗಮಂಗಲ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕಿಯರ ಪಾಠಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಲೋಕೇಶ್.ವಿ ರವರ ಅಧ್ಯಕ್ಷತೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಲಾಯಿತು,
ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ಅಥವಾ ಕನ್ನಡ ದಿನವೆಂದು ಆಚರಿಸಲಾಗುತ್ತದೆ. ಈ ದಿನವನ್ನು ಕರ್ನಾಟಕ ರಾಜ್ಯ ರಚನೆಯ ದಿನ ಅಥವಾ ಕರ್ನಾಟಕ ದಿನ ಎಂದೂ ಕರೆಯಲಾಗುತ್ತದೆ. 1956 ರಲ್ಲಿ ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಮೈಸೂರು ರಾಜ್ಯವನ್ನು ರಚಿಸಲಾಯಿತು.ಆದರೆ ಕರ್ನಾಟಕ ಹೆಸರು ಬಂದದ್ದು ಹೇಗೆ ಎಂದು ನೋಡುವುದಾದರೆ ಕರ್ನಾಟಕ ಪದದ ಮೂಲ ಸಂಸ್ಕೃತ ಭಾಷೆ. ಸಂಸ್ಕೃತದ ಕನ್ನಡ ಎಂಬ ಪದದಿಂದ ಕರ್ನಾಟಕ ಹುಟ್ಟಿದೆ. ಕನ್ನಡಿಗರ ನಾಡು, ಕನ್ನಾಡು, ಕನ್ನಡ ನಾಡು ಎಂಬುದು ಇದರ ಅರ್ಥ.ಆದರೆ ಕರ್ನಾಟಕ ಎಂಬ ಪದದ ಹುಟ್ಟು ಅಥವಾ ಅರ್ಥದ ಬಗ್ಗೆ ಹಲವು ಅಭಿಪ್ರಾಯಗಳಿವೆ. ಕರು + ನಾಡು = ಕರುನಾಡು ಎಂಬ ಪದವು ಕರ್ನಾಟಕವಾಯಿತು ಎನ್ನಲಾಗುತ್ತದೆ. ಕರು ಎಂದರೆ ಕಪ್ಪು, ಇದರರ್ಥ ಕಪ್ಪು ಮಣ್ಣಿನ ನಾಡು ಎಂದು ಹೇಳಲಾಗುತ್ತದೆ.
ಹಳೆಯ ಗ್ರಂಥಗಳು ಇದನ್ನು ಕರ್ನಾಟ ಎಂಬ ಪದದಿಂದ ಪಡೆಯಲಾಗಿದೆ ಎಂದು ಸೂಚಿಸುತ್ತವೆ. ಕೆಲವು ಮೂಲಗಳು ಕರ್ನಾಟಕವನ್ನು ಎತ್ತರದ ಭೂಮಿಗೆ ಅನುವಾದಿಸಿವೆ. ಕನ್ನಡಿಗರ ನಾಡನ್ನು ಮೈಸೂರು ರಾಜ್ಯದಿಂದ ಕರ್ನಾಟಕ ಎಂದು ಹೆಸರಿಡಬೇಕು ಎಂದು ಮೊದಲು 1972 ರ ಜುಲೈನಲ್ಲಿ ಈ ಬಗ್ಗೆ ಚರ್ಚೆ ಎದ್ದಿದ್ದು ಇದೆ ಸ್ನೇಹಿತರೇ. ದೀರ್ಘಾವಧಿಯ ಚರ್ಚೆಗಳ ನಂತರ ರಾಜ್ಯ ವಿಧಾನಸಭೆಯಲ್ಲೂ ಇದಕ್ಕೆ ಸರ್ವಾನುಮತದಿಂದ ಅನುಮತಿ ಸಿಕ್ಕಿತು.
ಆಲೂರು ವೆಂಕಟರಾವ್ ರವರು 1905 ರಲ್ಲಿ ಕರ್ನಾಟಕ ಏಕೀಕರಣ ಚಟುವಳಿಯೊಂದಿಗೆ ರಾಜ್ಯವನ್ನು ಏಕೀಕರಿಸುವ ಕನಸು ಕಂಡ ಮೊದಲ ವ್ಯಕ್ತಿ. ಅವರಿಗೆ ಈ ಸುಸಂದರ್ಭದಲ್ಲಿ ಧನ್ಯವಾದಗಳನ್ನು ಹೇಳೋಣ ಎಂದು ಶಾಲಾ ಶಿಕ್ಷಕರು ಮಕ್ಕಳಿಗೆ ತಿಳಿಸಿದರು,
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಲೋಕೇಶ್.ವಿ,ಶಿಕ್ಷಕರಾದ ಮಹೇಶ್,ಕಾಂತಮ್ಮ, ಸುಮಲತಾ, ಎಸ್ಡಿಎಂಸಿ ಸದಸ್ಯರು, ಪೋಷಕರು, ಶಾಲಾ ಮಕ್ಕಳು ಭಾಗವಹಿಸಿದ್ದರು
What's Your Reaction?






