ಮಾಜಿ ಸಚಿವ ಡಾ.ನಾರಾಯಣಗೌಡರ ನೇತೃತ್ವದಲ್ಲಿ ಕೃಷ್ಣರಾಜಪೇಟೆ ತಾಲ್ಲೂಕಿನ ಬಿಜೆಪಿ ಕಾರ್ಯಕರ್ತರ ಸಭೆ,
ಮಾಜಿ ಸಚಿವ ಡಾ.ನಾರಾಯಣಗೌಡರ ನೇತೃತ್ವದಲ್ಲಿ ಕೃಷ್ಣರಾಜಪೇಟೆ ತಾಲ್ಲೂಕಿನ ಬಿಜೆಪಿ ಕಾರ್ಯಕರ್ತರ ಸಭೆ, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲು ನಾಗಣ್ಣ ಮನವಿ.
ಮುಂಬರುವ ಕೃಷ್ಣರಾಜಪೇಟೆ ಪಿಎಲ್ ಡಿ ಬ್ಯಾಂಕ್ ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳ ಚುನಾವಣೆಯ ಸಂಬಂಧವಾಗಿ ಜನವರಿ 07ರ ಮಂಗಳವಾರ ಬೆಳಿಗ್ಗೆ 11ಗಂಟೆಗೆ ರಾಜ್ಯದ ಮಾಜಿ ಸಚಿವರಾದ ಕೃಷ್ಣರಾಜಪೇಟೆ ತಾಲೂಕಿನ ಅಭಿವೃದ್ಧಿಯ ಹರಿಕಾರ, ಅಭಿನವ ಭಗೀರಥ ಡಾ. ನಾರಾಯಣಗೌಡರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಕೆ. ಆರ್.ಪೇಟೆ ಪಟ್ಟಣದ ಮಾಜಿ ಸಚಿವರ ನಿವಾಸದ ಆವರಣದಲ್ಲಿ ಕರೆಯಲಾಗಿದೆ.
ಕೃಷ್ಣರಾಜಪೇಟೆ ತಾಲೂಕಿನ ಬಿಜೆಪಿ ಕಾರ್ಯಕರ್ತರು ಹಾಗೂ ಮಾಜಿ ಸಚಿವರಾದ, ದೀನ ದಲಿತರ ಬಂಧು ನಾರಾಯಣಗೌಡರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಭೆಯಲ್ಲಿ ಭಾಗವಹಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡುವ ಮೂಲಕ
ವಿಶ್ವನಾಯಕ, ನಮ್ಮೆಲ್ಲರ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿಯವರ ಕೈ ಬಲಪಡಿಸಿ ನಾರಾಯಣ ಗೌಡರಿಗೆ ಶಕ್ತಿ ತುಂಬಬೇಕು ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಸಾರಂಗಿ ಡಾ.ನಾಗಣ್ಣ ಹಾಗೂ ನಾರಾಯಣಗೌಡರ ಆಪ್ತ ಸಹಾಯಕ ದಯಾನಂದ ಮನವಿ ಮಾಡಿದ್ದಾರೆ.
What's Your Reaction?