*ಕಾವೇರಿ ನದಿ ನೀರಿನ ಹಂಚಿಕೆ ವಿರೋಧಿಸಿ ಕರೆಯಲಾಗಿದ್ದ ಕೆ. ಆರ್.ಪೇಟೆ ಬಂದ್ ಸಂಪೂರ್ಣ ಯಶಸ್ವಿಯಾಗಿದೆ* ...
*ಕಾವೇರಿ ನದಿ ನೀರಿನ ಹಂಚಿಕೆ ವಿರೋಧಿಸಿ ಕರೆಯಲಾಗಿದ್ದ ಕೆ. ಆರ್.ಪೇಟೆ ಬಂದ್ ಸಂಪೂರ್ಣ ಯಶಸ್ವಿಯಾಗಿದೆ* ...
ಕಾವೇರಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪನ್ನು ವಿರೋಧಿಸಿ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಕರೆಯಲಾಗಿದ್ದ ಕೆ ಆರ್ ಪೇಟೆ ಬಂದ್ ಸಂಪೂರ್ಣ ಯಶಸ್ವಿಯಾಗಿದೆ...
ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಸ್ವಯಂ ಪ್ರೇರಣೆಯಿಂದ ಬಂದ್ ನಲ್ಲಿ ಭಾಗವಹಿಸಿದರೆ, ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕಿರಾಮ್ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಬಂದ್ ನಲ್ಲಿ ಭಾಗವಹಿಸಿದ್ದರು..
ಕೃಷ್ಣರಾಜಪೇಟೆ ವಕೀಲರ ಸಂಘ, ತಾಲೂಕು ಮೆಕಾನಿಕ್ ಗಳ ಸಂಘ, ತಾಲೂಕು ಛಾಯಾಗ್ರಾಹಕರ ಸಂಘ, ಪತ್ರಕರ್ತರ ಸಂಘ, ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ, ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ, ಛಲವಾದಿ ಮಹಾಸಭಾ, ವಾಲ್ಮೀಕಿ ನಾಯಕ ಸಂಘ ಕಾವೇರಿ ಹೇಮಾವತಿ ಹೋರಾಟ ಸಮಿತಿಯ ಕಾರ್ಯಕರ್ತರು ಸೇರಿದಂತೆ ಸಾವಿರಾರು ಜನರು ಬಂದ್ ನಲ್ಲಿ ಭಾಗವಹಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು..
ಕೆ.ಆರ್.ಪೇಟೆ ಬಂದ್'ನಲ್ಲಿ ಶಾಸಕ ಹೆಚ್.ಟಿ.ಮಂಜು ಭಾಗವಹಿಸಿ. ಕಾವೇರಿ ಜಲ ವಿವಾದದ ಹಿನ್ನೆಲೆಯಲ್ಲಿ ನಿರ್ಲಕ್ಷ ಮನೋಭಾವನೆಯನ್ನು ಅನುಸರಿಸಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ಜನ ವಿರೋಧಿ ಧೋರಣೆಯನ್ನು ಶಾಸಕರು ತೀವ್ರವಾಗಿ ಖಂಡಿಸಿದರು. ಯಶಸ್ವಿ ಬಂದ್ ನಡೆಯಲು ಕಾರಣಕರ್ತರಾದ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರಿಗೆ ಧನ್ಯವಾದ ಸಮರ್ಪಣೆ ಮಾಡಿದ ಶಾಸಕ.. ಕೆ ಆರ್ ಪೇಟೆ ತಾಲ್ಲೂಕು ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ನೂರಾರು ವಿದ್ಯುತ್ ಗುತ್ತಿಗೆದಾರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.. ರಾಜಸ್ಥಾನ್ ಸೇವಾ ಸಮಿತಿ ವತಿಯಿಂದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಾವಿರಾರು ಕಾರ್ಯಕರ್ತರಿಗೆ ಅನ್ನ ಸಂತರ್ಪಣೆಯನ್ನು ಆಯೋಜಿಸಲಾಗಿತ್ತು. ನಾಗಮಂಗಲ ಡಿವೈಎಸ್ಪಿ ಲಕ್ಷ್ಮಿ ನಾರಾಯಣಪ್ರಸಾದ್, ಇನ್ಸ್ಪೆಕ್ಟರ್ ಜಗದೀಶ್ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿತ್ತು..
ಕಾವೇರಿ ನದಿ ಕೊಳ್ಳದ ಜನರು ಕುಡಿಯುವ ನೀರಿಗಾಗಿ ಸಂಕಷ್ಟ ಪಡುತ್ತಿದ್ದಾರೆ. ಕಾವೇರಿ, ಹೇಮಾವತಿ, ಕಬಿನಿ ಮತ್ತು ಹಾರಂಗಿ ಜಲಾಶಯಗಳಲ್ಲಿ ಸಂಪೂರ್ಣ ಕಡಿಮೆಯಾಗಿದ್ದು ಪ್ರಸ್ತುತ ಜಲಾಶಯಗಳಲ್ಲಿರುವ ನೀರು ಕುಡಿಯುವ ನೀರಿಗೆ ಮಾತ್ರ ಸಾಕಾಗುವಷ್ಟು ಇದೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ಪ್ರತಿನಿತ್ಯವೂ 5000 ಕ್ಯೂಸೆಕ್ಸ್ ನೀರನ್ನು ಹರಿಸಬೇಕೆಂಬ ರಾಷ್ಟ್ರದ ಸರ್ವೋಚ್ಚ ನ್ಯಾಯಾಲಯದ ತೀರ್ಪು ರಾಜ್ಯದ ರೈತರ ಪಾಲಿಗೆ ಮರಣ ಶಾಸನವಾಗಿದೆ. ಆದ್ದರಿಂದ ಕಾವೇರಿ ನ್ಯಾಯಾಧಿಕರಣದ ಮಧ್ಯಂತರ ಮಂಡಳಿ ಹಾಗೂ ಸರ್ವೋಚ್ಚ ನ್ಯಾಯಾಲಯಕ್ಕೆ ಕಾವೇರಿ ನದಿ ನೀರಿನ ಹಂಚಿಕೆ ಕುರಿತು ಮತ್ತೆ ಮೇಲ್ ಮನವಿ ಸಲ್ಲಿಸಿ ನ್ಯಾಯಕ್ಕಾಗಿ ಆಗ್ರಹಿಸುವುದು ಅನಿವಾರ್ಯವಾಗಿದೆ. ರಾಜ್ಯ ಸರ್ಕಾರವು ಅನ್ನದಾತರಾದ ರೈತರ ಹಿತ ಕಾಪಾಡಲು ಸಂಕಲ್ಪ ಮಾಡಿ ತಮಿಳುನಾಡಿಗೆ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಾ. ಎಸ್ ಕೃಷ್ಣಮೂರ್ತಿ, ಕಾವೇರಿ ಹೋರಾಟ ಸಮಿತಿಯ ಸಂಚಾಲಕ ಮರುವನಹಳ್ಳಿ ಶಂಕರ್, ನಾಗರಿಕ ಹಿತ ರಕ್ಷಣಾ ಸಮಿತಿ ಅಧ್ಯಕ್ಷ ನಾಟಕ ಹಳ್ಳಿ ಗಂಗಾಧರ್ ಆಗ್ರಹಿಸಿದರು...
ಅಂಗಡಿ ಮುಂಗಟ್ಟುಗಳು, ಶಾಲಾ ಕಾಲೇಜುಗಳು ಬಂದ್ ಆಗಿದ್ದರೆ, ವಾಹನಗಳ ಸಂಚಾರವು ಕಡಿಮೆಯಾಗಿತ್ತು.
*ವರದಿ,ರಾಜು ಜಿಪಿ
ಕಿಕ್ಕೇರಿ*
What's Your Reaction?