ಸ್ವಚ್ಚತೆಯನ್ನು ಕಾಪಾಡಿಕೊಂಡರೆ ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡಬಹುದು ಎಂದು ಶಾಸಕ ಹೆಚ್.ಟಿ.ಮಂಜು ಕರೆ ನೀಡಿದರು.

ಸ್ವಚ್ಚತೆಯನ್ನು ಕಾಪಾಡಿಕೊಂಡರೆ ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡಬಹುದು  ಎಂದು ಶಾಸಕ ಹೆಚ್.ಟಿ.ಮಂಜು ಕರೆ ನೀಡಿದರು.

ಕೆ.ಆರ್.ಪೇಟೆ.

 ಸಾರ್ವಜನಿಕರು ಸ್ವಚ್ಚತಾ ಕೆಲಸಗಳನ್ನು ಕೇವಲ ಒಂದು ದಿನಕ್ಕೆ ಮಾತ್ರ ಮೀಸಲಾಗದೇ ವರ್ಷವಿಡೀ ತಮ್ಮ ಮನೆಯ ಸುತ್ತಲೂ ಹಾಗೂ ನಮ್ಮ ನಮ್ಮ ಗ್ರಾಮಗಳಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಂಡರೆ ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡಬಹುದು ಎಂದು ಶಾಸಕ ಹೆಚ್.ಟಿ.ಮಂಜು ಕರೆ ನೀಡಿದರು.

ಅವರು ತಾಲ್ಲೂಕಿನ ಶೀಳನೆರೆ ಹೋಬಳಿಯ ತಮ್ಮ ಸ್ವಗ್ರಾಮ ಹರಳಹಳ್ಳಿ ಯಲ್ಲಿ ಮಹತ್ಮಾ ಗಾಂಧೀಜಿ ಯವರ ಮಹತ್ವಾಕಾಂಕ್ಷೆಯ ಸ್ವಚ್ಚತೆಗಾಗಿ ಶ್ರಮದಾನ ಕಾರ್ಯಕ್ರಮವನ್ನು ಶ್ರಮದಾನ ಮಾಡುವ ಮೂಲಕ ಚಾಲನೆ ನೀಡಿದರು.

ಗಾಂಧೀಜಯಂತಿಯ ಅಂಗವಾಗಿ ಒಂದು ದಿನ ಮುಂಚೆ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲಿ ಸ್ವಚ್ಚತೆ ಇರುತ್ತದೆಯೋ ಅಲ್ಲಿ ಉತ್ತಮವಾದ ಆರೋಗ್ಯವಂತರು ಇರುತ್ತಾರೆ. ಆದ್ದರಿಂದ ತಾವೆಲ್ಲರೂ ಪ್ರತಿದಿನ ನಿಮ್ಮ ಮನೆಗಳ ಸುತ್ತಮುತ್ತ ಹಾಗೂ ನಿಮ್ಮ ಗ್ರಾಮಗಳಲ್ಲಿ

ಸ್ವಚ್ಚತೆ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷ ಶಿವಲಿಂಗೇಗೌಡ, ಪಿಡಿಓ ಮಹದೇವ, ಗ್ರಾಪಂ ಸದಸ್ಯರಾದ ಯೋಗೇಶ್, ಉಮಾದೇವಿ, ಸಂಜೀವಿನಿ ಒಕ್ಕೂಟದ ಸದಸ್ಯರುಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿಗಳು ಗ್ರಾಮದ ಮುಖಂಡರುಗಳು ಹಾಜರಿದ್ದರು

What's Your Reaction?

like

dislike

love

funny

angry

sad

wow