*ಕೆ.ಆರ್.ಪೇಟೆ ಪಟ್ಟಣದಲ್ಲಿ ಇತಿಹಾಸ ನಿರ್ಮಿಸಿದ ಗಾಂಧಿ ಜಯಂತಿಯ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ

*ಕೆ.ಆರ್.ಪೇಟೆ ಪಟ್ಟಣದಲ್ಲಿ ಇತಿಹಾಸ ನಿರ್ಮಿಸಿದ  ಗಾಂಧಿ ಜಯಂತಿಯ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ

*ಕೆ.ಆರ್.ಪೇಟೆ ಪಟ್ಟಣದಲ್ಲಿ ಇತಿಹಾಸ ನಿರ್ಮಿಸಿದ ಗಾಂಧಿ ಜಯಂತಿಯ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಆಯೋಜಿಸಿದ್ದ ಜನಜಾಗೃತಿ ಜಾಥಾ ಮತ್ತು ವ್ಯಸನ ಮುಕ್ತ ಸಾಧಕರ ಸಮಾವೇಶ. ಸಾವಿರಾರು ಮಹಿಳೆಯರು ಜನಜಾಗೃತಿ ಜಾಥಾದಲ್ಲಿ ಭಾಗಿ, ದುಶ್ಚಟಗಳ ವಿರುದ್ಧ ಮೊಳಗಿದ ಘೋಷಣೆಗಳು* ..

ವ್ಯಸನಗಳಿಂದ ಮುಕ್ತವಾದ ಆರೋಗ್ಯವಂತ ಸಮಾಜದ ನಿರ್ಮಾಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಜನಜಾಗೃತಿ ವೇದಿಕೆಯ ಕಾರ್ಯವು ಶ್ಲಾಘನೀಯವಾಗಿದೆ ಎಂದು ರಾಜ್ಯದ ಮಾಜಿ ಸಚಿವರಾದ ಡಾ. ನಾರಾಯಣಗೌಡ ಹೇಳಿದರು..

ಅವರು ಕೆ ಆರ್ ಪೇಟೆ ಪಟ್ಟಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಗಾಂಧಿ ಜಯಂತಿ ಆಚರಣೆ ಸಮಿತಿಯ ನೇತೃತ್ವದಲ್ಲಿ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಆಯೋಜಿಸಿದ್ದ ಜನಜಾಗೃತಿ ಜಾಥಾ ಮತ್ತು ವ್ಯಸನ ಮುಕ್ತ ಸಾಧಕರ ಸಮಾವೇಶವದಲ್ಲಿ ಭಾಗವಹಿಸಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಸ್ವಾತಂತ್ರ ಪೂರ್ವದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಕುಡಿತ ಸೇರಿದಂತೆ ದುಶ್ಚಟ ಮುಕ್ತ ಸಮಾಜದ ನಿರ್ಮಾಣಕ್ಕೆ ಹೋರಾಟ ಮಾಡಿದ್ದರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ. ಡಿ.ವೀರೇಂದ್ರಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯು ಮಧ್ಯವರ್ಜನ ಶಿಬಿರಗಳನ್ನು ರಾಜ್ಯಾದ್ಯಂತ ಆಯೋಜಿಸಿ ಮದ್ಯಪಾನ ಸೇರಿದಂತೆ ದುಶ್ಚಟಗಳಿಗೆ ದಾಸರಾಗಿ ತಮ್ಮ ಅಮೂಲ್ಯವಾದ ಜೀವನ ಹಾಗೂ ಜೀವವನ್ನು ಕಳೆದುಕೊಳ್ಳುತ್ತಿರುವ ಜನರನ್ನು ಮಧ್ಯಪಾನ ಚಟದಿಂದ ಬಿಡಿಸಿ ನವ ಜೀವನದತ್ತ ಮುನ್ನಡೆಸುತ್ತಿದ್ದಾರೆ. ಲಕ್ಷಾಂತರ ಕುಟುಂಬಗಳು ಇಂದು ಕುಡಿತದ ಚಟದಿಂದ ಹೊರಬಂದು ತಮ್ಮ ಕುಟುಂಬದ ಸದಸ್ಯರೊಂದಿಗೆ ಸಂತೋಷದಿಂದ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ವ್ಯಸನ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ದುಡಿಯುತ್ತಿರುವ ವೀರೇಂದ್ರ ಹೆಗಡೆಯವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ದಾರಿಯಲ್ಲಿ ಸಾಗುವ ಮೂಲಕ ಜನರಲ್ಲಿ ಜಾಗೃತಿಯನ್ನು ಮೂಡಿಸಿ ವ್ಯಸನಮುಕ್ತ ಆರೋಗ್ಯವಂತ ಸಮಾಜದ ನಿರ್ಮಾತೃಗಳಾಗಿದ್ದಾರೆ ಎಂದು ಅಭಿಮಾನದಿಂದ ಹೇಳಿದ ನಾರಾಯಣಗೌಡ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳಾ ಸಬಲೀಕರಣಕ್ಕೆ ಕಾರಣವಾಗಿದ್ದು ಒಂದು ಸರ್ಕಾರವು ಮಾಡಲಾಗದ ಸಮಾಜಮುಖಿ ಕಾರ್ಯಗಳನ್ನು ಧರ್ಮಸ್ಥಳ ಸಂಸ್ಥೆಯು ಇಂದು ಯಶಸ್ವಿಯಾಗಿ ಅನುಷ್ಠಾನಗೊಳಿಸಿ, ಗುಡಿ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಇಡೀ ಸಮಾಜವನ್ನೇ ಪ್ರಗತಿಯ ದಿಕ್ಕಿನಂತ ಕೊಂಡೊಯ್ಯುತ್ತಿದೆ ಎಂದು ಹೇಳಿದರು.

ಶಾಸಕ ಎಚ್.ಟಿ.ಮಂಜು ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾರ್ಥಕ ಸೇವೆಯನ್ನು ಗುಣಗಾನ ಮಾಡಿದರು.

ಜನಜಾಗೃತಿ ಜಾಥಾವನ್ನು ಉದ್ಘಾಟಿಸಿದ ಸಮಾಜಸೇವಕ ರಾಜ್ಯ ಆರ್‌ಟಿಓ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಸಮಾಜಮುಖಿ ಚಟುವಟಿಕೆಗಳಿಂದಾಗಿ ಇಂದು ಗ್ರಾಮೀಣ ಪ್ರದೇಶದ ಜನರು ಸದೃಢ ಸ್ವಾವಲಂಬಿ ಜೀವನವನ್ನು ನಡೆಸಲು ಸಾಧ್ಯವಾಗಿದೆ. ಕುಡಿತ ಧೂಮಪಾನ ಸೇರಿದಂತೆ ದುಶ್ಚಟಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಾಮಾಜಿಕ ಜಾಗೃತಿ ಮೂಡಿಸಿ ವ್ಯಸನಮುಕ್ತ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ದುಡಿಯುತ್ತಿರುವ ಸಂಸ್ಥೆಯ ಕಾರ್ಯದಕ್ಷತೆಯು ಮಾದರಿಯಾಗಿದ್ದು ದುಶ್ಚಟಗಳಿಂದ ಬಿಡುಗಡೆ ಹೊಂದಿ ನವ ಜೀವನಕ್ಕೆ ಕಾಲಿಡುತ್ತಿರುವ ಸಾವಿರಾರು ಕುಟುಂಬಗಳಿಗೆ ದಾರಿದೀಪವಾಗಿದೆ ಎಂದರು.

ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಜಯರಾಮ ತೋಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಆಶಯ ಭಾಷಣ ಮಾಡಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಸರಸ್ವತಿ ಇಂದು ದುಶ್ಚಟಗಳು ಇಡೀ ಕುಟುಂಬದ ನೆಮ್ಮದಿಯನ್ನು ಹಾಳು ಮಾಡುತ್ತಾ, ಜೀವನವನ್ನೇ ಕಣ್ಣೀರಿನಲ್ಲಿ ಕೈ ತೊಳೆಯುವಂತೆ ಮಾಡುತ್ತಿವೆ. ಇಂದು ಮಕ್ಕಳು ಹಾಗೂ ಯುವ ಜನರು ಮೊಬೈಲ್ ಫೋನುಗಳ ದಾಸರಾಗಿ ಕುಡಿತದಂತೆಯೇ ಮತ್ತೊಂದು ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ.. ಮೊಬೈಲ್ ಫೋನಿನ ಹಾವಳಿಯಿಂದಾಗಿ ಮಾನವೀಯ ಸಂಬಂಧಗಳು ಕ್ಷೀಣಿಸುತ್ತಿವೆ, ವೈಜ್ಞಾನಿಕ ಆವಿಷ್ಕಾರಗಳ ಫಲವನ್ನು ಒಳ್ಳೆಯ ಕೆಲಸ ಕಾರ್ಯಗಳಿಗೆ ಬಳಸಬೇಕೇ ಹೊರತು, ಸಮಯಯನ್ನು ಹಾಳು ಮಾಡುವ ಮೊಬೈಲ್ ಆನ್‌ಲೈನ್ ಗೇಮುಗಳು, ಫೇಸ್ಬುಕ್ ವ್ಯಾಟ್ಸಪ್ ಗಳಿಗೆ ಬಳಕೆ ಮಾಡಿಕೊಂಡು ತಮ್ಮ ಅಮೂಲ್ಯವಾದ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಈ ದಿಕ್ಕಿನಲ್ಲಿ ಪೋಷಕರು ತಮ್ಮ ಮಕ್ಕಳ ಬಗ್ಗೆ ಎಚ್ಚರ ವಹಿಸಬೇಕು. ಬಾಲ್ಯದಿಂದಲೇ ಮಕ್ಕಳಿಗೆ ಉತ್ತಮವಾದ ಸಂಸ್ಕಾರವನ್ನು ನೀಡುವ ಮೂಲಕ ನಮ್ಮ ಸಮಾಜಕ್ಕೆ ಉತ್ತಮ ನಾಗರೀಕರನ್ನು ಕೊಡುಗೆಯಾಗಿ ನೀಡಬೇಕು ಎಂದು ಸರಸ್ವತಿ ಮನವಿ ಮಾಡಿದರು.

ಮಂಡ್ಯ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸೀಳನೆರೆ ಅಂಬರೀಶ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಜಾನಕಿರಾಮ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೈಸೂರು ವಿಭಾಗದ ಪ್ರಾದೇಶಿಕ ನಿರ್ದೇಶಕ ಜಯರಾಮ್ ನೆಲ್ಲಿತ್ತಾಯ, ಜಿಲ್ಲಾ ನಿರ್ದೇಶಕ ಕೇಶವದೇವಾಂಗ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ ಎಸ್ ಬಸವೇಗೌಡ, ಮಾಜಿ ನಿರ್ದೇಶಕ ಅಕ್ಕಿಹೆಬ್ಬಾಳು ರಘು, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿಶ್ರಾಂತ ಶಿಕ್ಷಕ ಡಾ. ಅಂಚಿ ಸಣ್ಣ ಸ್ವಾಮಿಗೌಡ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹೊಸ ಹೊಳಲು ಅಶೋಕ್, ತಾಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅರವಿಂದ್ ಕಾರಂತ್, ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷ ಮಂಜುಳಾ ಚನ್ನಕೇಶವ, ಸುನಿತಾ ದಯಾನಂದ್, ಮೊಟ್ಟೆ ಮಂಜು, ಜ್ಯೋತಿ ದೇವರಾಜ, ಜನಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ ಡಾ. ಕೆ.ಎಸ್.ರಾಜೇಶ್, ತಾಲೂಕು ಯೋಜನಾಧಿಕಾರಿ ಮಮತಾಶೆಟ್ಟಿ, ಕುವೆಂಪು ಕನ್ನಡ ಗೆಳೆಯರ ಬಳಗದ ಸೇವಾ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷರಾದ ಕೆಬಿಸಿ ಮಂಜುನಾಥ್,ಉಷಾ, ಸೋಮಪ್ಪ, ತಾಲೂಕು ವೃತ್ತಿನಿರತ ಟೈಲರ್ ಗಳ ಸಂಘದ ಅಧ್ಯಕ್ಷ ಮಂಜುನಾಥ್, ಸೇರಿದಂತೆ ಸಾವಿರಾರು ಜನರು ಸಾಧಕರ ಸಮಾವೇಶದಲ್ಲಿ ಭಾಗವಹಿಸಿದ್ದರು.

*ವರದಿ, ರಾಜು ಜಿಪಿ ಕಿಕ್ಕೇರಿ*

What's Your Reaction?

like

dislike

love

funny

angry

sad

wow