*ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಠ ಪಿಡುಗುಗಳು*

*ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಠ ಪಿಡುಗುಗಳು*

*ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಠ ಪಿಡುಗುಗಳು*

 ನಿರ್ಮೂಲನೆ ಯು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗದ ಸದಸ್ಯ ಮಿಕ್ಕೆರೆ ವೆಂಕಟೇಶ್ ಹೇಳಿದರು.

*ಮಂಡ್ಯ ಜಿಲ್ಲೆಯ ಗಡಿ ತಾಲೂಕಾಗಿರುವ ಕೃಷ್ಣರಾಜಪೇಟೆಯಿಂದ ಮುಂಬೈ ಮಹಾನಗರಕ್ಕೆ ನೇರ ಸಂಪರ್ಕವಿರುವುದರಿಂದ ಮಕ್ಕಳ ಸಾಗಾಣಿಕೆ, ಬಾಲ್ಯ ವಿವಾಹದಂತಹ ಅನಿಷ್ಟ ಪದ್ದತಿಗಳು ಇಂದಿಗೂ ಜೀವಂತವಾಗಿವೆ. ಆದ್ದರಿಂದ ತಾಲೂಕು ಮಟ್ಟದ ಅಧಿಕಾರಿಗಳು ಮಕ್ಕಳ ಹಕ್ಕುಗಳ ರಕ್ಷಣೆ ವಿಚಾರದಲ್ಲಿ ಜಾಗೃತರಾಗಿ ಕೆಲಸ ಮಾಡಬೇಕು ಎಂದು ತಾಲೂಕು ಮಟ್ಟದ ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಮಿಕ್ಕೆರೆ ವೆಂಕಟೇಶ್ ಸೂಚನೆ ನೀಡಿದರು* .

ಅವರು ಕೃಷ್ಣರಾಜಪೇಟೆ ಆಡಳಿತ ಕಾರ್ಯಸೌಧದ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳ ಸಂರಕ್ಷಣೆ ವಿಚಾರದಲ್ಲಿ ಕೈಗೊಂಡಿರುವ ಕ್ರಮಗಳು ಹಾಗೂ ಈವರೆಗೆ ದಾಖಲಾಗಿರುವ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದು ಮಾತನಾಡಿದರು.

ಕೃಷ್ಣರಾಜಪೇಟೆ ತಾಲೂಕಿನ ಜನರು ನೆರೆಯ ಮಹಾರಾಷ್ಟ್ರ ರಾಜ್ಯದ ಮುಂಬೈ ಮಹಾನಗರದಲ್ಲಿ ನೇರವಾಗಿ ವ್ಯಾಪಾರ ವಹಿವಾಟು ಸೇರಿದಂತೆ, ಜೀವನ ನಡೆಸುತ್ತಿರುವುದರಿಂದ ಮುಂಬೈ ಮಹಾನಗರದ ನಂಟಿದೆ. ಕೃಷ್ಣರಾಜಪೇಟೆ ತಾಲೂಕಿನಲ್ಲಿ ಮಕ್ಕಳ ಮಾರಾಟ ಜಾಲ ಸೇರಿದಂತೆ ಬಾಲ್ಯವಿವಾಹ, ಅಸ್ಪೃಶ್ಯತೆ ಆಚರಣೆ, ಸಾಮಾಜಿಕ ಕಟ್ಟುಪಾಡುಗಳ ಆಚರಣೆಯಂತಹ ಕಾನೂನು ಬಾಹಿರವಾದ ಚಟುವಟಿಕೆಗಳು ನಡೆಯುತ್ತಿದೆ. ತಾಲೂಕು ಮಟ್ಟದ ಅಧಿಕಾರಿಗಳು ಈ ಬಗ್ಗೆ ಎಚ್ಚರವಹಿಸಿ ಸಮಾಜ ವಿರೋಧಿ ಚಟುವಟಿಕೆಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು. ಹೆಣ್ಣು ಮಕ್ಕಳ ಪಾಲಿಗೆ ಶಾಪವಾಗಿರುವ ಬಾಲ್ಯ ವಿವಾಹದಂತಹ ಪ್ರಕರಣಗಳು ನಡೆಯದಂತೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಕೆ ಆರ್ ಪೇಟೆ ತಾಲೂಕಿನಲ್ಲಿ ಮಹಿಳೆಯರು ಮತ್ತು ಮಕ್ಕಳು ಕಾಣೆಯಾಗುವ ಪ್ರಕರಣಗಳು ಸರ್ವೇ ಸಾಮಾನ್ಯವಾಗಿವೆ. ಗ್ರಾಮದಿಂದ ನಾಪತ್ತೆಯಾದ ಮಹಿಳೆಯರು ಎಲ್ಲಿದ್ದಾರೆ? ಏನು ಮಾಡುತ್ತಿದ್ದಾರೆ ಎಂಬುದು ಈವರೆಗೆ ಗೊತ್ತಾಗುತ್ತಿಲ್ಲ. ಮಹಿಳೆಯರ ಮತ್ತು ಮಕ್ಕಳ ಮಾರಾಟ ಜಾಲಗಳು ಸಕ್ರಿಯವಾಗಿರುವ ಬಗ್ಗೆ ಆಯೋಗಕ್ಕೆ ಮಾಹಿತಿ ಇದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಗಳು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪೊಲೀಸರು ನಿಗಾವಹಿಸಿ, ಅಕ್ರಮ ದಂಧೆಕೋರರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ ವೆಂಕಟೇಶ್, ಕಾನೂನಿಗಿಂತ ಯಾರೂ ದೊಡ್ಡವರಲ್ಲ, ನಾಗರೀಕ ಸಮಾಜದಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕಾನೂನಿನ ಪರಿಮಿತಿಯೊಳಗೆ ಜೀವನ ನಡೆಸಬೇಕು. ತಂದೆ ತಾಯಿಗಳು ಮತ್ತು ಪೋಷಕರು ಮಕ್ಕಳ ಹಕ್ಕುಗಳನ್ನು ಸಂರಕ್ಷಣೆ ಮಾಡಿ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳಿಸಿ ವಿದ್ಯಾವಂತರನ್ನಾಗಿ ಮಾಡುವ ಮೂಲಕ ಭವಿಷ್ಯದ ನಾಯಕರನ್ನಾಗಿ ತಯಾರು ಮಾಡಬೇಕು. ಈ ದಿಕ್ಕಿನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗಕ್ಕೆ ಸಹಕಾರ ನೀಡಬೇಕು ಎಂದು ಹೇಳಿದರು. ಕೆ ಆರ್ ಪೇಟೆ ಪಟ್ಟಣ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸುಮಾರಾಣಿ ಮಾತನಾಡಿ ಬಾಲ್ಯ ವಿವಾಹ ಹಾಗೂ ಶಾಲೆಗೆ ಹೋಗುವ ಮಕ್ಕಳನ್ನು ಬಾಲಕಾರ್ಮಿಕ ರನ್ನಾಗಿ ಬಳಸಿಕೊಂಡು ಶೋಷಣೆ ಮಾಡುತ್ತಿರುವ ಪ್ರಕರಣಗಳು ನಮ್ಮ ಗಮನಕ್ಕೆ ಬಂದ ಕೂಡಲೇ ಕಾರ್ಯೋನ್ಮುಖರಾಗಿ ಕ್ರಿಮಿನಲ್ ಪ್ರಕರಣ ದಾಖಲಿಸಿ ಮಕ್ಕಳ ಹಕ್ಕುಗಳನ್ನು ಸಂರಕ್ಷಣೆ ಮಾಡಿದ್ದೇವೆ. ನಾಗರೀಕ ಸಮಾಜಕ್ಕೆ ಶಾಪವಾಗಿರುವ ಬಾಲ್ಯವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಯನ್ನು ಅಳಿಸಿ ಹಾಕುವ ದಿಕ್ಕಿನಲ್ಲಿ ನಾವು ಕ್ರಿಯಾಶೀಲವಾಗಿದ್ದೇವೆ ಎಂದು ಹೇಳಿದರು. ತಹಶೀಲ್ದಾರ್ ನಿಸರ್ಗಪ್ರಿಯ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್ ಎಸ್ ಸೀತಾರಾಮ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಅರುಣ್ ಕುಮಾರ್, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಬಸವರಾಜು, ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ವೆಂಕಟೇಶ್ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಚಂದ್ರಶೇಖರ್, ತಾಲೂಕು ಪಂಚಾಯಿತಿ ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಡಾ.ನರಸಿಂಹರಾಜು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿ ನೀಡಿದರು.

 *ವರದಿ ರಾಜು ಜಿಪಿ ಕಿಕ್ಕೇರಿ*

What's Your Reaction?

like

dislike

love

funny

angry

sad

wow