ಕೃಷ್ಣರಾಜಪೇಟೆ ತಾಲೂಕು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಜನರ ಕುಂದುಕೊರತೆ ನಿವಾರಣಾ ಸಭೆಯು ಪಟ್ಟಣದ ಹೊರ ವಲಯದ ಚಿಕ್ಕೋನಹಳ್ಳಿ ರೇಷ್ಮೆ ತರಭೇತಿ ಸಂಸ್ಥೆಯ ಸಭಾಂಗಣದಲ್ಲಿ ಶಾಸಕ ಹೆಚ್.ಟಿ.ಮಂಜು ಅವರ ಅಧ್ಯಕ್ಷತೆಯಲ್ಲಿ ನಡೆಯಿತು*.
ಕೃಷ್ಣರಾಜಪೇಟೆ ತಾಲೂಕಿನಾದ್ಯಂತ ದಲಿತರ ಮೇಲೆ ದಬ್ಬಾಳಿಕೆ ಹಾಗೂ ದೌರ್ಜನ್ಯ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಮೇಲ್ವರ್ಗದ ಜನರು ದಲಿತರ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ, ದಲಿತ ಕೇರಿಗಳಲ್ಲಿ ಹಾಗೂ ಗೂಡಂಗಡಿಗಳಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಪುರಸಭೆ ಸದಸ್ಯ ಡಿ. ಪ್ರೇಮಕುಮಾರ್ ಹಾಗೂ ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಮಾಂಬಳ್ಳಿ ಜಯರಾಮ್ ಆಗ್ರಹಿಸಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳು ಕಳೆಯುತ್ತಿದ್ದರೂ ಸಂವಿಧಾನದ ಆಶಯಗಳು ಇಂದಿಗೂ ಈಡೇರಿಲ್ಲಾ, ಸಾಮಾಜಿಕ ನ್ಯಾಯದ ಅಡಿಯಲ್ಲಿ ಅಧಿಕಾರಿಗಳು ಕೆಲಸ ಮಾಡಿ ದಲಿತರ ಸ್ವಾಭಿಮಾನವನ್ನು ಎತ್ತಿ ಹಿಡಿಯುವ ದಿಕ್ಕಿನಲ್ಲಿ ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಶಾಸಕ ಮಂಜು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ತಹಸೀಲ್ದಾರ್ ಕರ್ನಲ್ ಡಾ. ಅಶೋಕ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ದಿವಾಕರ್, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಸುಷ್ಮಾ, ಸಬ್ ಇನ್ಸ್ಪೆಕ್ಟರ್ ಸುಬ್ಬಯ್ಯ, ಕೆ ಆರ್ ಪೇಟೆ ಟೌನ್ ಟೇಷನ್ ಸಬ್ ಇನ್ಸ್ಪೆಕ್ಟರ್ ನವೀನ್, ಕಿಕ್ಕೇರಿ ಪೊಲೀಸ್ ಠಾಣಾ ಎಎಸ್ಐ ರಮೇಶ್, ತಾಲೂಕು ಹಿಂದುಳಿದ ವರ್ಗಗಳ
ವಿಸ್ತರಣಾಧಿಕಾರಿ ವೆಂಕಟೇಶ್, ಸಿಡಿಪಿಓ ಅರುಣ್ ಕುಮಾರ್, ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಮುಖಂಡರುಗಳಾದ ರಾಜಯ್ಯ, ಬಸ್ತಿ ರಂಗಪ್ಪ,ಕಿಕ್ಕೇರಿ ರಾಜಣ್ಣ,ಚೌಡೇನಹಳ್ಳಿ ದೇವರಾಜ್, ರಾಜು ಜಿ ಪಿ, ಗಂಗೆನಹಳ್ಳಿ ಕೃಷ್ಣಯ್ಯ, ಅಗ್ರಹಾರ ಬಾಚಳ್ಳಿ ಜಗದೀಶ್, ಮುದ್ದಪ್ಪ, ಬಸವರಾಜ್, ರಮೇಶ್, ಚಿಕ್ಕಳಲೆ ಬದ್ರಿ, ಸುರೇಶ್,ಗಣೇಶ್ ಸೇರಿದಂತೆ ತಾಲೂಕು ಮಟ್ಟದ ಮುಖಂಡರು ಅಧಿಕಾರಿಗಳು ಹಾಗೂ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಚರ್ಚೆಯಲ್ಲಿ ಭಾಗವಹಿಸಿದ್ದರು.
What's Your Reaction?