*ಯುವ ಜನರು, ವಿದ್ಯಾರ್ಥಿಗಳು ಏಕಾಗ್ರತೆಯಿಂದ ವ್ಯಾಸಂಗ ಮಾಡಿ ಗುರಿಸಾಧನೆ ಮಾಡಬೇಕು. ಸೇವಾ ಮನೋಭಾವನೆ ಹಾಗೂ ಪರೋಪಕಾರ ಗುಣಗಳು ಜೀವನದ ಉಸಿರಾಗಬೇಕು ಎಂದು ಕೆ.ಆರ್.ಪೇಟೆ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ. ಸುಮಾರಾಣಿ ಕರೆ ನೀಡಿದರು*.

*ಯುವ ಜನರು, ವಿದ್ಯಾರ್ಥಿಗಳು ಏಕಾಗ್ರತೆಯಿಂದ ವ್ಯಾಸಂಗ ಮಾಡಿ ಗುರಿಸಾಧನೆ ಮಾಡಬೇಕು. ಸೇವಾ ಮನೋಭಾವನೆ ಹಾಗೂ ಪರೋಪಕಾರ ಗುಣಗಳು ಜೀವನದ ಉಸಿರಾಗಬೇಕು ಎಂದು ಕೆ.ಆರ್.ಪೇಟೆ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ. ಸುಮಾರಾಣಿ ಕರೆ ನೀಡಿದರು*.

ಅವರು ಕೃಷ್ಣರಾಜಪೇಟೆ ಪಟ್ಟಣದ ಕಲ್ಪತರು ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎ, ಬಿಕಾಂ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ಆಯೋಜಿಸಿದ್ದ ಸ್ವಾಗತ ಸಮಾರಂಭವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಯುವ ಶಕ್ತಿಯು ಬಲಿಷ್ಠವಾದ ಶಕ್ತಿಯಾಗಿದ್ದು ಯುವ ಜನರು ಮನಸ್ಸು ಮಾಡಿ ಅಚಲವಾಗಿ ನಿಂತರೆ ಸಾಕು ಯಾವುದೇ ಕೆಲಸವನ್ನು ಸುಲಭವಾಗಿ ಮಾಡಿ ಮುಗಿಸುವ ಸಾಮರ್ಥ್ಯ ಹೊಂದಿರುವುದರಿಂದ ಯುವಕರು ತಮ್ಮಲ್ಲಿನ ಕೀಳರಿಮೆಯನ್ನು ಅಳಿಸಿಹಾಕಿ ಆತ್ಮವಿಶ್ವಾಸದಿಂದ ಹೆಜ್ಜೆ ಹಾಕಬೇಕು. ವಿದ್ಯಾಭ್ಯಾಸದ ಸಮಯದಲ್ಲಿ ನಮ್ಮ ಗುರಿಯು ಓದಿನ ಕಡೆ ಇರಬೇಕೆ ಹೊರತು ಮೊಬೈಲ್ ವ್ಯಾಮೋಹಕ್ಕೆ ಒಳಗಾಗಿ ವ್ಯಾಟ್ಸಪ್, ಫೇಸ್ ಬುಕ್, ಮೊಬೈಲ್ ಚಾಟಿಂಗ್, ಗೇಮ್ ಎಂದು ವ್ಯರ್ಥವಾಗಿ ಕಾಲಹರಣ ಮಾಡದೇ ಶ್ರದ್ಧಾ ಭಕ್ತಿಯಿಂದ ವ್ಯಾಸಂಗ ಮಾಡಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀ ರ್ಣರಾಗಿ ಸರ್ವ ಶ್ರೇಷ್ಠ ಸಾಧನೆ ಮಾಡಿ ತಂದೆ ತಾಯಿಗಳು ಹಾಗೂ ಗುರುಹಿರಿಯರ ಕೀರ್ತಿಯನ್ನು ಬೆಳಗಿ ಸಾಧಕರಾಗಿ ಹೊರಹೊಮ್ಮಬೇಕು ಎಂದು ಸುಮಾರಾಣಿ ಕರೆ ನೀಡಿದರು.

ರಾಜ್ಯ ರೈತ ಸಂಘದ ಹಿರಿಯ ಮುಖಂಡ ಲಕ್ಷ್ಮೀಪುರ ಜಗಧೀಶ್ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿ ನಾವು ಮಾಡುವ ಯಾವುದೇ ಕೆಲಸ ಕೀಳಲ್ಲ. ಆದರೆ ನಾವು ಮಾಡುವ ಕೆಲಸದ ಮೇಲೆ ನಮಗೆ ವಿಶ್ವಾಸ ಗೌರವ ಇರಬೇಕು. ಹಸಿದ ಹೊಟ್ಟೆಗೆ ತನ್ನ ಶ್ರಮದ ದುಡಿಮೆಯ ಮೂಲಕ ಭತ್ತ ಬೆಳೆದು ಅನ್ನ ನೀಡುವ ರೈತನ ಕಾಯಕವು ಶ್ರೇಷ್ಠ ಕೆಲಸವಾಗಿದ್ದರೂ ರೈತರ ಕೃಷಿ ಚಟುವಟಿಕೆ ನಡೆಸಲು

ಯಾರೊಬ್ಬರೂ ಮುಂದೆ ಬರುವುದಿಲ್ಲ. ಕಷ್ಟ ಪಡದೇ, ಕೈ ಕೆಸರಾಗದೇ ಸುಮ್ಮನೆ ಕುಳಿತುಕೊಂಡು ವ್ಯರ್ಥವಾಗಿ ಕಾಲಹರಣ ಮಾಡಿದರೆ ಕೋಟಿ ರೂಪಾಯಿ ಕೂಡ ಹೆಚ್ಚು ದಿನ ನಮ್ಮಲ್ಲಿ ಉಳಿಯುವುದಿಲ್ಲ ಎಂಬ ಸತ್ಯ ಅರಿತು ಕಷ್ಟಪಟ್ಟು ವ್ಯಾಸಂಗ ಮಾಡಿ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.

ಮಾತೃಶ್ರೀ ವಿದ್ಯಾ ಸಂಸ್ಥೆಯ ಅಧ್ಯಕ್ಷ ವಿಠಲಾಪುರ ಜಯರಾಮ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪುರಸಭೆ ಮಾಜಿ ಸದಸ್ಯ ಕೆ.ಆರ್. ನೀಲಕಂಠ, ಕಾಲೇಜಿನ ಅಧೀಕ್ಷಕ ಶಿವಕುಮಾರ್ ಹಾಗೂ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಪ್ರಥಮ ಬಿಎ, ಬಿಕಾಂ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಲಾಯಿತು.

What's Your Reaction?

like

dislike

love

funny

angry

sad

wow