*ಬೂಕನಕೆರೆಯಲ್ಲಿ ಬೃಹತ್ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿದ ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್*
ಕೆ.ಆರ್.ಪೇಟೆ
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿ0ದ ತಾಲೂಕಿನ ಬೂಕನಕೆರೆ ಗ್ರಾಮದ ಪಂಚಾಯತ್ ಸಮುದಾಯ ಭವನದಲ್ಲಿ ಪದ್ಮವಿಭೂಷಣ ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ , ಮತ್ತು ಮಾತೃ ಶ್ರೀ ಡಾ.ಹೇಮವತಿ ವಿ.ಹೆಗ್ಗಡೆ ರವರ ಶುಭಾಶೀರ್ವಾದದೊಂದಿಗೆ 1887ನೇ ಮದ್ಯ ವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್(ರಿ),ಕೆ.ಆರ್.ಪೇಟೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ), ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಚನ್ನರಾಯಪಟ್ಟಣ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲ್ಯಾಲ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ಇವರ ಮಾರ್ಗದರ್ಶನದಲ್ಲಿ ಆಯೋಜಿಸಿದ್ದ 1887ನೇ ಮದ್ಯವರ್ಜನ ಶಿಬಿರದ ತಾಲ್ಲೋಕಿನ ಮಾಜಿ ಶಾಸಕರಾದ
ಕೆ.ಬಿ.ಚಂದ್ರಶೇಖರ್ ಉದ್ಘಾಟನೆ ನೆರವೇರಿಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮಪಂಚಾಯತಿ ಅಧ್ಯಕ್ಷರಾದ ಬಿ.ಆರ್.ಶ್ಯಾಮ್ ಪ್ರಸಾದ್ ವಹಿಸಿದ್ದರು,ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ ಆಶ ಯದಂತೆ ಧರ್ಮಸ್ಥಳ ಸಂಸ್ಥೆ ರಾಜ್ಯಾದ್ಯಂತ ಮದ್ಯ ವರ್ಜನ ಶಿಬಿರ ಆಯೋಜಿಸಿ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತಿದೆ.ಬೂಕನಕೆರೆ ಗ್ರಾಮಸ್ಥರು ಇದರ ಸದುಪಯೋಗ ಪಡಿಸಿಕೊಂಡು ಮದ್ಯಪಾನ ಸೇವನೆಯನ್ನು ತ್ಯಜಿಸಿ ಕುಟುಂಬದ ಸದಸ್ಯರ ಜೊತೆ ಆನೂನ್ಯವಾಗಿ ಜೀವನ ನೆಡೆಸುವಂತೆ ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್ ರವರು ತಿಳಿಸಿದರು,
ಜಿಲ್ಲಾ ನಿರ್ದೇಶಕರಾದ ಕೇಶವ ದೇವಾಂಗ ರವರು ಮಾತನಾಡಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ತಾಲ್ಲೋಕಿನಲ್ಲಿ ಮಹಿಳೆಯರ ಆರ್ಥಿಕ ಸ್ಥಿತಿ ಉತ್ತಮಗೊಳಿಸಿ ಸ್ವಾವಲಂಬನೆ ಜೀವನ ನೆಡೆಸಲು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿಯಾಗಿದೆ ಜೊತೆಗೆ ಮದ್ಯದ ಚಟದಿಂದ ಹಲವಾರು ಸಂಸಾರಗಳು ಕಷ್ಟದ ಪರಿಸ್ಥಿತಿಯಲ್ಲಿದೆ ಇದನ್ನು ಮನಗೊಂಡ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕುಡಿತದ ಚಟವನ್ನು ಬಿಡಿಸುವ ನಿಟ್ಟಿನಲ್ಲಿ ಈಗಾಗಲೇ 1887ನೇ ಮದ್ಯವರ್ಜನ ಶಿಬಿರದಂತಹ ಕಾರ್ಯಕ್ರಮ ಮಾಡುವ ಕುಡಿತವನ್ನು ಬಿಡಿಸುವ ಕಾರ್ಯಕ್ಕೆ ಮುಂದಾಗಿರುವುದಾಗಿ ಪ್ರಾಸ್ತಾವಿಕ ನುಡಿಗಳನ್ನು ತಿಳಿಸಿದರು,
ಈ ಉದ್ಘಾಟನಾ ಸಮಾರಂಭದಲ್ಲಿ ಗ್ರಾಪಂ ಅಧ್ಯಕ್ಷ ಬಿ.ಆರ್. ಶ್ಯಾಂಪ್ರಸಾದ್,ಬಿ.ಟಿ. ವೆಂಕಟೇಶ್, ಬಿ.ಜವರಾಯಿಗೌಡ, ಹುಲ್ಲೇಗೌಡ, ಗ್ರಾಮಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ,ಶೀಳನೆರೆ ಅಂಬರೀಷ್, ಯೋಜನಾಧಿಕಾರಿಗಳಾದ ತಿಲಕ್ ರಾಜ್,ಡಾ.ವೆಂಕಟೇಶ್, ಕೆ.ಎನ್.ರಾಜೇಶ್ ನಿಕಟಪೂರ್ವ ಅಧ್ಯಕ್ಷರು ಜನಜಾಗೃತಿ ವೇದಿಕೆ, ಸದಸ್ಯರಾದ ಪದ್ಮ, ನರಸಿಂಹರಾಜು,ಕೆ.ಎಸ್.ಸತೀಶ್, ಮಾಧ್ಯಮ ಸ್ಟುಡಿಯೋ ಸಂಮಿತ್ರರು ಪತ್ರಕರ್ತರಾದ ಲೋಕೇಶ್.ವಿ,ರವಿ.ಎಸ್, ರಂಗನಾಥ್ ಮಾಕವಳ್ಳಿ,ಪ್ರಕಾಶ್ ಆಚಾರ್ಯ, ಮೇಲ್ವಿಚಾರಕರು ಹಾಗೂ ಸೇವಾ ಪ್ರತಿನಿಧಿಗಳು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ಗ್ರಾಮಸ್ಥರು ಸೇರಿದಂತೆ ಮತ್ತಿತರು ಭಾಗವಹಿಸಿದ್ದರು,
*ವರದಿ; ರಾಜು ಜಿ ಪಿ ಕಿಕ್ಕೇರಿ ಕೆ ಆರ್ ಪೇಟೆ*
What's Your Reaction?