*ಜನವರಿ 16ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕ್ಯಾಲೆಂಡರ್ ಬಿಡುಗಡೆ ಸಮಾರಂಭ;*
ಕೆ.ಆರ್.ಪೇಟೆ ಪಟ್ಟಣದ ಶಿಕ್ಷಕರ ಭವನದಲ್ಲಿ [ ಗುರುಭವನ ] ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲ್ಲೋಕು ಘಟಕದ ವತಿಯಿಂದ 16.01.2025ನೇ ಗುರುವಾರ ಬೆಳಿಗ್ಗೆ 10.ಗಂಟೆಗೆ 2025ನೇ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಹು.ಲಿ.ಅಮರನಾಥ್, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಶ್ರೀಮತಿ ನಾಗಲಕ್ಷ್ಮೀ ಚೌಧರಿ, ಹೇಮಗಿರಿ ಬಿಜಿಎಸ್ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಡಾ.ಜೆ.ಎನ್.ರಾಮಕೃಷ್ಣೇಗೌಡರು,ಶ್ರೀ ಕುವೆಂಪು ಕನ್ನಡ ಗೆಳೆಯರ ಸೇವಾ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷರಾದ ಕೆಬಿಸಿ ಮಂಜುನಾಥ್,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿಗಳಾದ ತಿಲಕ್ ರಾಜ್, ಕುಮಾರ್.ಕೆ.ಎಸ್ [ಕುಮಾರ್ ಸ್ಪೀಚ್ & ಕ್ಲಾತ್ ಸೆಂಟರ್ ಮಾಲೀಕರು],ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಪೂರ್ಣಚಂದ್ರ ತೇಜಸ್ವಿ, ಅರ್ಚಕರಾದ ವಿಶ್ವನಾಥ್, ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಗೋವಿಂದರಾಜು, ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ತಾಲ್ಲೋಕಿನ ನಾಗಲಕ್ಷ್ಮೀ ಚೌಧರಿ ರವರ ಅಭಿಮಾನಿಗಳು ಯಾವುದೇ ರೀತಿಯ ಸಮಸ್ಯೆಗಳನ್ನು ಹಂಚಿಕೊಳ್ಳಲು ಸದಾವಕಾಶ ಇದ್ದು ಸಾರ್ವಜನಿಕರು ಸಂಘ- ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷರಾದ ಲೋಕೇಶ್.ವಿ ಹಾಗೂ ಕಾರ್ಯಕಾರಿ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
What's Your Reaction?