ಕರ್ನಾಟಕ ಪೋಲೀಸ್ ಜನಸ್ನೇಹಿ: ಡಾ.ನಾಗಲಕ್ಷ್ಮೀಚೌಧರಿ

ಕರ್ನಾಟಕ ಪೋಲೀಸ್ ಜನಸ್ನೇಹಿ: ಡಾ.ನಾಗಲಕ್ಷ್ಮೀಚೌಧರಿ

ಕೆ.ಆರ್.ಪೇಟೆ ಪಟ್ಟಣದ ಶಿಕ್ಷಕರ ಭವನದಲ್ಲಿ (ಗುರುಭವನ) ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿದ್ದ 2025ನೇ ನೂತನ ಕ್ಯಾಲೆಂಡರ್ ಬಿಡುಗಡೆ ಸಮಾರಂಭಕ್ಕೆ ವಿಶೇಷ ಅತಿಥಿಗಳಾಗಿ ಆಗಮಿಸಿದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಶ್ರೀಮತಿ ಡಾ.ನಾಗಲಕ್ಷ್ಮೀ ಚೌಧರಿ , ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ತಿಲಕ್ ರಾಜ್,ಕೆಬಿಸಿ ಮಂಜುನಾಥ್,ಕುಮಾರ್ ಸ್ಪೀಚ್ & ಕ್ಲಾತ್ ಮಾಲೀಕರಾದ ಕೆ.ಎಸ್.ಕುಮಾರ್, ಪೂರ್ಣಚಂದ್ರ ತೇಜಸ್ವಿ, ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷರಾದ ನಾಗೇಗೌಡ,ಸುಮರಾಣಿ, ಆನಂದ್ ಗೌಡ,

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಲೋಕೇಶ್.ವಿ ಕಾರ್ಯಕ್ರಮವನ್ನು ಉದ್ಘಾಟಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಹಿಳೆಯರು ತಮ್ಮ ವಿರುದ್ಧ ಅನ್ಯಾಯ ನಡೆದ ಸಂದರ್ಭದಲ್ಲಿ ಯಾವ ಭಯವು ಇಲ್ಲದೆ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸುವ ಧೈರ್ಯ ಬೆಳಸಿಕೊಳ್ಳಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ತಿಳಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಕ್ಯಾಲೆಂಡರ್ ಬಿಡುಗಡೆ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ವತಿಯಿಂದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮಕ್ಕೆ ಬರಬೇಡಿ ಎಂದು ಪೋನ್ ಮಾಡಿ ಒತ್ತಾಯ ಮಾಡಿದರು ಸಹ ನನ್ನ ಮಗನ ಸಮಾನನಾದ ಲೋಕೇಶ್ ಹಾಗೂ ಗೋವಿಂದರಾಜು ರವರು ನನ್ನ ಮೇಲೆ ಇಟ್ಟಿರುವ ಅಭಿಮಾನಕ್ಕೆ ನಾನೂ ಕೆ.ಆರ್.ಪೇಟೆಗೆ‌ ಎರಡನೇ ಬಾರಿಗೆ ಆಗಮಿಸಿರುವುದಾಗಿ ತಿಳಿಸಿದರು,

ಕರ್ನಾಟಕ ಪೊಲೀಸ್ ಜನ ಸ್ನೇಹಿ ಕರ್ನಾಟಕ ಪೊಲೀಸ್ ಜನ ಸ್ನೇಹಿ ಎಂದೇ ಹೆಸರುವಾಸಿಯಾಗಿದ್ದು, ಮಹಿಳೆಯರು ತಮ್ಮ ಬಳಿ ಸದಾ ಸ್ಥಳೀಯ ಪೊಲೀಸ್ ಠಾಣೆ ಅಥವಾ ಪೊಲೀಸ್ ಅಧಿಕಾರಿಗಳ ಸಂಖ್ಯೆಯನ್ನು ಇಟ್ಟಿಕೊಳ್ಳಬೇಕು.

ಕಷ್ಟದಲ್ಲಿ ಅಥವಾ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಸಂದರ್ಭದಲ್ಲಿ ಸರಿಯಾದ ಸ್ಪಂದನೆ ಸಿಗದಿದ್ದರೆ ನಂತರ ಜಿಲ್ಲೆಯ ಪೊಲೀಸ್ ವರಿಷ್ಠಾಕಾರಿಗಳನ್ನು ಸಂಪರ್ಕಿಸಿ ಎಂದು ಕಿವಿ ಮಾತು ಹೇಳಿದರು.ಮಹಿಳೆಯರು ಸ್ವಾವಲಂಬಿಗಳಾಗಿ ಮಹಿಳೆಯರು ಮನೆಯಿಂದ ಹೊರ ಹೋಗುವ ಮುನ್ನ ಅವರ ಪರ್ಸ್‌ನಲ್ಲಿ ಹಣ ತರಬೇಕು.ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯ ಅತ್ಯವಶ್ಯಕ ವಾಗಿದ್ದು, ಮಹಿಳೆಯರು ಸ್ವಾವಲಂಬಿಗಳಾಗಲು ಹಲವಾರು ತರಬೇತಿ ಹಾಗೂ ಯೋಜನೆಗಳನ್ನು ರೂಪಿಸಿದೆ ಸದುಪಯೋಗ ಪಡಿಸಿಕೊಳ್ಳಿ ಎಂದರು,

ಬಾಲ್ಯವಿವಾಹದಂತಹ ಅನಿಷ್ಟವನ್ನು ತೊಡೆದು ಹಾಕಲು ಮಹಿಳೆಯರಿಂದಲೇ ಸಾಧ್ಯ ತಾಯಿ ತನ್ನ ಮಗಳಿಗೆ ವಿದ್ಯಾಭ್ಯಾಸ ನೀಡುತ್ತೇನೆ. ಬಾಲ್ಯ ವಿವಾಹ ಮಾಡುವುದಿಲ್ಲ ಎಂದು ಪಣ ತೊಡಬೇಕು ಎಂದರು.ಹೆಣ್ಣು ಮಕ್ಕಳಿಗೆ ಜೀವನದಲ್ಲಿ ಸಾಧನೆ ಮಾಡಲು ಕನಸು ಕಾಣಬೇಕು ಹಾಗೂ ಗುರಿ ನಿಗದಿ ಮಾಡಿಕೊಳ್ಳಬೇಕು. ಗುರಿ ಸಾಧನೆಗೆ ಜೀವನದಲ್ಲಿ ಹಲವಾರು ತೊಡಕುಗಳು ಬರುತ್ತವೆ ಅವುಗಳನ್ನು ಮೆಟ್ಟಿ ನಿಲ್ಲಬೇಕು. ನಿರಂತರ ಪರಿಶ್ರಮ ಹಾಗೂ ಶ್ರದ್ಧೆಯಿಂದ ಮಾತ್ರ ಗುರಿ ಮುಟ್ಟಲು ಸಾಧ್ಯ ಎಂದರು.

*ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಆರ್ಶಿವಾದ ಇರುತ್ತೆ ಡಾ.ಜೆ.ಎನ್.ರಾಮಕೃಷ್ಣೇಗೌಡ*

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭಕ್ಕೆ ವಿಶೇಷ ಅತಿಥಿಗಳಾಗಿ ಆಗಮಿಸಿದ ಹೇಮಗಿರಿ ಬಿಜಿಎಸ್ ಶಾಖಾ ಮಠದ ಪ್ರಧಾನ ಕಾರ್ಯದರ್ಶಿಗಳಾದ ಡಾ.ಜೆ.ಎನ್.ರಾಮಕೃಷ್ಣೇಗೌಡರು ಮಾತನಾಡಿ ಲೋಕೇಶ್ ಹಾಗೂ ರಾಜು ರವರು ನವೆಂಬರ್ 30ರಂದು ತಾಲ್ಲೋಕಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವನ್ನು ಉದ್ಘಾಟಿಸಿದ ನಂತರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಶ್ರೀಮತಿ ಡಾ.ನಾಗಲಕ್ಷ್ಮೀ ಚೌಧರಿ ರವರು ಕ್ಯಾಲೆಂಡರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿದ್ದು ಆಶ್ಚರ್ಯಕರ ವಾಗಿದ್ದು ಇವರ ಪರಿಶ್ರಮದ ಫಲವಾಗಿದೆ, ಇವರ ಒಳ್ಳೆಯ ಕಾರ್ಯಗಳಿಗೆ ನನ್ನ ಆಶಿರ್ವಾದ ಸದಾ ಇರುವುದಾಗಿ ತಿಳಿಸಿದರು,

ನಂತರ ಮಾತನಾಡಿದ ಶ್ರೀ ಕುವೆಂಪು ಕನ್ನಡ ಗೆಳೆಯರ ಸೇವಾ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷರಾದ ಕೆಬಿಸಿ ಮಂಜುನಾಥ್ ಒಗ್ಗಟ್ಟಿನಿಂದ ಮಾಡಿದ ಕೆಲಸಕ್ಕೆ ಯಾವುದೇ ಅಡೆತಡೆಗಳು ಬರುವುದಿಲ್ಲ ಅನ್ನೋದಿಕ್ಕೆ ಈ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಸಾಕ್ಷಿಯಾಗಿದ್ದು ಇವರ ಪರಿಶ್ರಮದಿಂದ ತಾಲೋಕಿನಲ್ಲಿ ಸರ್ಕಾರಿ ಕಛೇರಿಗಳು, ಆಸ್ಪತ್ರೆಗಳು,ಬಸ್ ವ್ಯವಸ್ಥೆ, ಹಾಸ್ಟೆಲ್ ಗಳಿಗೆ ಭೇಟಿ ನೀಡಿರುವ ಡಾ.ನಾಗಲಕ್ಷ್ಮೀ ಚೌಧರಿ ರವರ ಆಗಮನದಿಂದ ಸಾರ್ವಜನಿಕರ ಸಹಕಾರ ಆಗಿದೆ ಎಂದು ಹೇಳಿ ನಿಮ್ಮೆಲ್ಲರ ಜೊತೆಗೆ ನಾನೂ ಸಹ ಸದಾಕಾಲ ಬೆನ್ನೆಲುಬಾಗಿ ಇರುವುದಾಗಿ ತಿಳಿಸಿದರು,

ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಹೇಮಗಿರಿ ಬಿಜಿಎಸ್ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಜೆ.ಎನ್.ರಾಮಕೃಷ್ಣೇಗೌಡ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಪೂರ್ಣಚಂದ್ರ ತೇಜಸ್ವಿ, ವಕೀಲರ ಸಂಘದ ಅಧ್ಯಕ್ಷರಾದ ನಾಗೇಗೌಡ ,ತಾಲೂಕಿನ ಮುಖ್ಯ ಅಧಿಕಾರಿಗಳಾದ ತಹಸಿಲ್ದಾರ್ ಗ್ರೇಡ್-2 ಬಿ.ಆರ್.ಲೋಕೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಅರುಣ್ ಕುಮಾರ್, ಕಾರ್ಯನಿರ್ವಾಹಕ ಅಧಿಕಾರಿ ಸುಷ್ಮಾ, ತಾಲೂಕು

ವೈದ್ಯಾಧಿಕಾರಿ ಅಜಿತ್ ಕುಮಾರ್, ಶ್ರೀ ಕುವೆಂಪು ಕನ್ನಡ ಗೆಳೆಯರ ಸೇವಾ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷರಾದ ಕೆಬಿಸಿ ಮಂಜುನಾಥ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ತಿಲಕ್ ರಾಜ್, ಕುಮಾರ್ ಕ್ಲಾತ್ ಸೆಂಟರ್ ಮಾಲೀಕರಾದ ಕೆ.ಎಸ್.ಕುಮಾರ್, ಆರಕ್ಷಕ ನಿರೀಕ್ಷಕರಾದ ಸುಮಾರಾಣಿ,ಆನಂದೇ ಗೌಡ,

ರಾಜಸ್ಥ ನಿರೀಕ್ಷಕರಾದ ಜ್ಞಾನೇಶ್, ಮಹಿಳಾ ಹೋರಾಟಗಾರ್ತಿ ಪ್ರಿಯಾ ರಮೇಶ್, ಅನಿಲ್, ರಾಣಿ, ವಿವಿಧ ಸಂಘಟನೆಯ ಅಧ್ಯಕ್ಷರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಸಂಮಿತ್ರರು,ನಾಗಲಕ್ಷ್ಮೀ ಚೌಧರಿ ಅಭಿಮಾನಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು,

*ವರದಿ,ರಾಜು ಜಿ ಪಿ ಕಿಕ್ಕೇರಿ ಕೆ ಆರ್ ಪೇಟೆ*

What's Your Reaction?

like

dislike

love

funny

angry

sad

wow