*ಹೇಮಗಿರಿ ಬಿಜಿಎಸ್ ಶಾಲಾ ಮಕ್ಕಳಿಂದ ವಿಜ್ಞಾನ ವಸ್ತು ಪ್ರದರ್ಶನ ಬಿಜಿಎಸ್ ಹೇಮಗಿರಿ ಶಾಖ ಮಠದ ಪ್ರಧಾನ ಕಾರ್ಯದರ್ಶಿಗಳಾದ ಡಾ. ಜೆ ಎನ್ ರಾಮಕೃಷ್ಣೇಗೌಡರ ಸಾರಥ್ಯದಲ್ಲಿ*

ಕೆ.ಆರ್.ಪೇಟೆ: ವಿಜ್ಞಾನದ ವಿಷಯವಾಗಿ ವಿದ್ಯಾರ್ಥಿಗಳಲ್ಲಿ ಸೂಕ್ತವಾಗಿರುವ ಜ್ಞಾನ ಪ್ರತಿಭೆಯನ್ನು ಹೊರಹೊಮ್ಮಿಸಲು ವಿಜ್ಞಾನ ವಸ್ತು ಪ್ರದರ್ಶನ ಉತ್ತಮ ವೇದಿಕೆಯಾಗಿದೆ ಎಂದು ಸಮಾಜ ಸೇವಕರಾದ ಆರ್.ಟಿ.ಓ ಮಲ್ಲಿಕಾರ್ಜುನ್ ಹೇಳಿದರು.
ತಾಲ್ಲೂಕಿನ ಕಸಬಾ ಹೋಬಳಿಯ ಹೇಮಗಿರಿಯ ಬಿಜಿಎಸ್ ಶಾಖಾಮಠದ ಪ್ರಧಾನ ಕಾರ್ಯದರ್ಶಿಗಳಾದ ಡಾ: ಜೆ.ಎನ್ ರಾಮಕೃಷ್ಣೇಗೌಡರ ಮಾರ್ಗದರ್ಶನದಲ್ಲಿ ಹೇಮಗಿರಿ ಬಿಜಿಎಸ್ ಎಜುಕೇಶನ್ ಸೆಂಟರ್ ಶಾಲಾ ಆವರಣದಲ್ಲಿ ಮಕ್ಕಳಿಂದ ನಡೆದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳ ಜ್ಞಾನ ವೃದ್ಧಿಗೆ ಪ್ರದರ್ಶನಗಳು ಪೂರಕವಾಗಿವೆ. ಅವರಲ್ಲಿ ತಂತ್ರಜ್ಞಾನ, ಪರಿಸರ ಕಾಳಜಿ ಹಾಗೂ ಚರಿತ್ರೆಯ ಬಗ್ಗೆ ಆಸಕ್ತಿ ಬೆಳೆಯುತ್ತದೆ. ಅವರಲ್ಲಿರುವ ಸೃಜನಶೀಲತೆಗೆ ಉತ್ತೇಜನ ಸಿಗುತ್ತದೆ.ವಿಜ್ಞಾನ ಎಂದರೆ ಒಂದು ಸಂಜೀವಿನಿಯಂತೆ ಬದುಕಿನಲ್ಲಿ ನಮಗೆ ಜ್ಞಾನ ಹಾಗೂ ಸರಿಯಾದ ಪ್ರಜ್ಞೆ ಬರಬೇಕೆಂದರೆ ವಿಜ್ಞಾನದ ಅವಶ್ಯಕತೆ ಇದೆ.ವಿಜ್ಞಾನವು ಜ್ಞಾನದ ವಿಸ್ತಾರವನ್ನು ಹೆಚ್ಚಿಸುತ್ತದೆ. ನಮ್ಮಲ್ಲಿರುವ ಅಂಧಕಾರವನ್ನು ತೊಲಗಿಸುತ್ತದೆ. ಸಮಾಜವನ್ನು ಉತ್ತಮ ರೀತಿಯಲ್ಲಿ ನಡೆಸಲು ಅವಕಾಶ ಮಾಡಿಕೊಡುತ್ತದೆ. ಮಕ್ಕಳಲ್ಲಿ ಮೂಢನಂಬಿಕೆ ತೊಲಗಿಸಿ ವೈಜ್ಞಾನಿಕ ಮನೋಭಾವ ಬೆಳೆಸಲು ಹಾಗೂ ವಿಜ್ಞಾನದಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಲು ವಿಜ್ಞಾನ ವಸ್ತು ಪ್ರದರ್ಶನ ಸಹಕಾರಿಯಾಗುತ್ತದೆ ಎಂದು ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹೇಮಗಿರಿ ಬಿಜಿಎಸ್ ಶಾಖಾ ಮಠದ ಪ್ರಧಾನ ಕಾರ್ಯದರ್ಶಿ ಡಾ. ಜೆ ಎನ್ ರಾಮಕೃಷ್ಣೇಗೌಡ ಬಿಜಿಎಸ್ ಶಾಲೆ ಎಂದರೆ ವಿಶೇಷ ವಿನೂತನ ಕಾರ್ಯಕ್ರಮಗಳನ್ನು ರೂಪಿಸುವ ಕಣಜ ಮಕ್ಕಳು ಪ್ರಶ್ನಿಸದೆ ಯಾವುದೇ ಸಂಗತಿಯನ್ನು ಒಪ್ಪಬಾರದು. ತಾಂತ್ರಿಕವಾಗಿ ಬೆಳೆಯುತ್ತಿರುವ ಇಂದಿನ ಯುಗವನ್ನು ಜ್ಞಾನದ ಯುಗ ವಿಜ್ಞಾನದ ಯುಗ ಎಂದು ಹೇಳಬಹುದು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಕ್ಷರಾಭ್ಯಾಸ ಇದ್ದರೆ ಸಾಲದು. ಮಕ್ಕಳಿಗೆ ಅನ್ವೇಷಣೆ, ಸಂಶೋಧನೆ ಹಾಗೂ ಸೃಜನಾತ್ಮಕ ಮನೋಧೋರಣೆಯನ್ನು ಬೆಳೆಸಲು ಇಂತಹ ವಿಜ್ಞಾನ ವಸ್ತು ಪ್ರದರ್ಶನ ಅನುಕೂಲಕರ.ಶೈಕ್ಷಣಿಕ ಕಾರ್ಯಕ್ರಮಗಳಾದ ಚಿಣ್ಣರ ಮೇಳ, ಮಕ್ಕಳ ವಿಜ್ಞಾನ ಹಬ್ಬ, ಮಕ್ಕಳ ಸಾಹಿತ್ಯ ಸಂಭ್ರಮದಂತಹ ಹತ್ತು ಹಲವು ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಸಾಕಷ್ಟು ಶೈಕ್ಷಣಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮಾಡಿದೆ ಎಂದರು.
ಶಾಲಾ ಮಕ್ಕಳ ತಯಾರಿಸಿದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ತಂತ್ರಜ್ಞಾನ, ವಿಜ್ಞಾನದ ಆವಿಷ್ಕಾರಗಳು, ಪ್ರಾಕೃತಿಕ ಸಂಪತ್ತು ರಕ್ಷಣೆ, ಐತಿಹಾಸಿಕ ಸ್ಥಳಗಳು, ಬಣ್ಣಗಳ ವರ್ಗೀಕರಣ, ಬೆಳಕಿನ ಶಕ್ತಿ ಬಳಕೆ, ಗಾಳಿ, ನೀರಿನ ಮಿತ ಬಳಕೆ, ಪ್ರಾಣಿ ಪಕ್ಷಿ ಸಂರಕ್ಷಣೆ, ಹಸಿರು ಯೋಜನೆ, ಆಹಾರ ಪದ್ದತಿ, ಆಧುನಿಕ ಮನುಷ್ಯರ ಜೀವನ ಶೈಲಿ, ಯಂತ್ರಗಳ ಬಳಕೆ ಸೇರಿದಂತೆ ವಿದ್ಯಾರ್ಥಿಗಳು ಪ್ರದರ್ಶಿಸಿದ ವಿವಿಧ ಮಾದರಿಗಳು ಶಿಕ್ಷಕರ ಮತ್ತು ಪೋಷಕರ ಗಮನ ಸೆಳೆದವು.
ಈ ಸಂದರ್ಭದಲ್ಲಿ ಹೇಮಗಿರಿ ಬಿಜಿಎಸ್ ಶಾಲಾ ಪ್ರಾಂಶುಪಾಲ ಆನಂದ್, ಪುನೀತ್, ಮುಖ್ಯ ಶಿಕ್ಷಕ ಜಯಶೀಲ,ಪತ್ರಕರ್ತ ಮಹೇಶ್ ಗಂಜಿಗೆರೆ, ಸಯ್ಯದ್ ಕಲಿಲ್,ರಾಜು ಜಿ ಪಿ , ಮಾಕವಳ್ಳಿ ಮನು, ಶಾಲಾ ಶಿಕ್ಷಕ ವೃಂದ ಮಕ್ಕಳ ಪೋಷಕರು ವಿದ್ಯಾರ್ಥಿಗಳು ಸೇರಿದಂತೆ ಉಪಸ್ಥಿತರಿದ್ದರು.
*ವರದಿ ರಾಜು ಜಿ ಪಿ ಕಿಕ್ಕೇರಿ ಕೆ ಆರ್ ಪೇಟೆ*
What's Your Reaction?






