ಪ್ರಗತಿ ಶಿಕ್ಷಣ ಸಂಸ್ಥೆಯಲ್ಲಿ ಪುಸ್ತಕ ಹಬ್ಬ ಹಾಗೂ ದೀಪಾವಳಿ ಕವಿಗೋಷ್ಠಿ
ಆರ್ ಪೇಟೆ _ಪರಿಚಯ ಪ್ರಕಾಶನ, ತಾಲ್ಲೂಕು ಯುವ ಬರಹಗಾರರ ಬಳಗ, ಪ್ರಗತಿ ಶಿಕ್ಷಣ ಸಂಸ್ಥೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಹಳೇ ಮೈಸೂರು ರಸ್ತೆಯಲ್ಲಿರುವ ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನ. 11ರಂದು ಮಧ್ಯಾಹ್ನ 2 ಗಂಟೆಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ 'ಪುಸ್ತಕ ಹಬ್ಬ ಹಾಗೂ ದೀಪಾವಳಿ ಕವಿಗೋಷ್ಠಿ'ಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪರಿಚಯ ಪ್ರಕಾಶನದ ಸಂಸ್ಥಾಪಕರಾದ ಶಿವಕುಮಾರ್ ಆರಾಧ್ಯ ರವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು,_
_ಕಾರ್ಯಕ್ರಮ ಕುರಿತು ಮಾತನಾಡಿದ ಕಾಂತರಾಜ್ ದಿನಾಂಕ ಇದೆ ತಿಂಗಳು ನವೆಂಬರ್ 11/12 ರಂದು ಪಟ್ಟಣದ ಪ್ರಗತಿ ಶಿಕ್ಷಣ ಸಂಸ್ಥೆಯಲ್ಲಿ ಪುಸ್ತಕ ಹಬ್ಬ ಹಾಗೂ ದೀಪಾವಳಿ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದ್ದು ತಾಲ್ಲೂಕಿನ ಕನ್ನಡಪರ ಸಂಘಟನೆಗಳು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮಾಧ್ಯಮಗಳ ಮೂಲಕ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು,_
_ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ಎ.ಸಿ. ಕಾಂತರಾಜು, ಕರವೇ ಸ್ವಾಭಿಮಾನಿ ಸೇನೆ ತಾಲೂಕು ಘಟಕದ ಅಧ್ಯಕ್ಷರು ಸಮೀರ್, ಕರುನಾಡು ಯುವಜನ ವೇದಿಕೆ ರಾಜ್ಯ ಉಪಾಧ್ಯಕ್ಷ ಲೋಕೇಶ್.ವಿ, ಕರುನಾಡು ಯುವ ಜನ ವೇದಿಕೆಯ ಜಿಲ್ಲಾಧ್ಯಕ್ಷ ಎಸ್. ರವಿ, ಕರುನಾಡು ಯುವಜನ ವೇದಿಕೆಯ ತಾಲ್ಲೂಕು ಅಧ್ಯಕ್ಷ ಯುವರಾಜ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಸಾಯಿಕುಮಾರ್. ಎನ್. ಕೆ, ಕರ್ನಾಟಕ ಮಾನವ ಹಕ್ಕುಗಳ ಜನ ಸೇವಾ ಸಮಿತಿಯ ಜಿಲ್ಲಾಧ್ಯಕ್ಷ ಪೃಥ್ವಿರಾಜ್. ಕಿಕ್ಕೇರಿ, ಕರ್ನಾಟಕ ರಕ್ಷಣಾ ಸೇನೆ ತಾಲೂಕು ಅಧ್ಯಕ್ಷ ಪ್ರಶಾಂತ್ ಗೌಡ, ಜಯ ಕರ್ನಾಟಕ ಸಂಘಟನೆ ಮತ್ತು ಅಪ್ಪು ಯುವ ಸಾಮ್ರಾಜ್ಯದ ತಾಲೂಕು ಅಧ್ಯಕ್ಷ ಮಹೇಶ್.ಕೆ. ಎಲ್, ಗೋಪಿ ಗೌಡ, ಶ್ಯಾಮ್ ಸುಂದರ್, ಆನುವಿನಕಟ್ಟೆ ಆನಂದ್, ಧನಲಕ್ಷ್ಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು,
What's Your Reaction?